ಮಹದಾಯಿ ಕಣಿವೆಗೆ ಕೇಂದ್ರ ತಂಡದ ಭೇಟಿ: ಗೋವಾದ ಸುಳ್ಳು ಆರೋಪಗಳ ಕುರಿತು ಮನವರಿಕೆ

ಮಹದಾಯಿ ಜಲಾನಯನ ಪ್ರದೇಶವಾಗಿರುವ ಕಣಕುಂಬಿಗೆ ಭಾನುವಾರ ಕೇಂದ್ರದ ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರದ (ಪ್ರವಾಹ್‌) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Central team visit to Mahadayi Valley Convinced of Goa false allegations gvd

ಬೆಳಗಾವಿ (ಜು.08): ಮಹದಾಯಿ ಜಲಾನಯನ ಪ್ರದೇಶವಾಗಿರುವ ಕಣಕುಂಬಿಗೆ ಭಾನುವಾರ ಕೇಂದ್ರದ ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರದ (ಪ್ರವಾಹ್‌) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಲ್ಲಿನ‌ ಅಧಿಕಾರಿಗಳಿಂದ ವಸ್ತುಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಮೂಲಕ ಗೋವಾ ಸುಳ್ಳು ಆರೋಪ ಮಾಡುವ ಮೂಲಕ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿರುವ ಬಗ್ಗೆ ತಂಡಕ್ಕೆ ಮನವರಿಕೆಯಾಗಿದೆ.

ಮೊದಲು ಚೋರ್ಲಾ ಘಾಟ್‌ ಮತ್ತು ಹರತಾಳ ನಾಲಾವನ್ನು ವೀಕ್ಷಣೆ ಮಾಡಿ ಕೇಂದ್ರದ ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಪರ ನದಿ ಪ್ರಾಧಿಕಾರದ ತಂಡ ಆ ಬಳಿಕ ಖಾನಾಪುರ ತಾಲೂಕಿನ ಕಣಕುಂಬಿಯ ಅತಿಥಿ ಗೃಹದಲ್ಲಿ ರಾಜ್ಯದ ನೀರಾವರಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಈ ವೇಳೆ ನಕ್ಷೆ ಸಮೇತ ಕಳಸಾ, ಬಂಡೂರಿ ಯೋಜನೆಯ ಬಗ್ಗೆ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು. ನಂತರ ಕಳಸಾ, ಬಂಡೂರಿ ಯೋಜನೆ ಸ್ಥಳಕ್ಕೂ ಕೇಂದ್ರದ ತಂಡ ಭೇಟಿ ನೀಡಿತು. ಗೋವಾ ಸಿಎಂ ಟ್ವೀಟ್ ಮೂಲಕ ವನ್ಯಜೀವಿ, ಪರಿಸರ, ಅರಣ್ಯ ಇಲಾಖೆ ಅನುಮತಿ ಇಲ್ಲದೇ ಕರ್ನಾಟಕ ಮಹದಾಯಿ ಕಾಮಗಾರಿ ಆರಂಭಿಸಿದೆ ಆರೋಪಿಸಿದ್ದರು. ಕಣಕುಂಬಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ ಕೇಂದ್ರ ತಂಡ ಎದುರು ಗೋವಾ ಬಣ್ಣ ಬಟಾಬಯಲಾಗಿದೆ.

ನಂತರ ಕರ್ನಾಟಕ ನೀರಾವರಿ ನಿಗಮದ‌ ಎಂಡಿ ರಾಜೇಶ ಅಮ್ಮಿನಭಾವಿ ಮಾತನಾಡಿ, ಒಟ್ಟು 8 ಜನರ ತಂಡ ಕೇಂದ್ರದಿಂದ‌ ಬಂದು ಭೇಟಿ ಮಾಡಿದೆ. ಮಹದಾಯಿ ಜಲಾನಯನ ಪ್ರದೇಶದಲ್ಲಿ ಏನೇನು ಆಗುತ್ತಿದೆ ಎಂಬುವುದನ್ನು ನೋಡಲು ತಂಡ ಬಂದಿತ್ತು. ಗೋವಾ ಎರಡು ದಿನ‌, ಮಹಾರಾಷ್ಟ್ರ ಎರಡು ದಿನಗಳ ಭೇಟಿಯ ನಂತರ‌ ನಮ್ಮ ರಾಜ್ಯಕ್ಕೆ ಬಂದಿದೆ. ಇದೊಂದು ಭೇಟಿ ‌ಮಾತ್ರ‌ ಎಂದ ಅವರು, ಕರ್ನಾಟಕದ ಬಣ್ಣ ಬಯಲಾಗಲಿದೆ ಎಂಬ ಗೋವಾ ಸಿಎಂ ಪ್ರಮೋದ ಸಾವಂತ ಟ್ವೀಟ್ ವಿಚಾರಕ್ಕೆ ಆ ಬಗ್ಗೆ ನನಗೆ ‌ಗೊತ್ತಿಲ್ಲ. ಕಾಮಗಾರಿಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವ ತಂಡ ಇದಲ್ಲ ಎಂದರು.

ನಿಷೇಧವಿದ್ದರೂ ಫಾಲ್ಸ್‌ಗಳಲ್ಲಿ ಮೋಜು, ಮಸ್ತಿ: ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ

ಗೋವಾ ‌ಸರ್ಕಾರದ ಒತ್ತಾಯದ ಮೇರೆಗೆ ಪ್ರವಾಹ ತಂಡವನ್ನು ಕೇಂದ್ರ ಸರ್ಕಾರ ರಚಿಸಿದೆ. ಪ್ರವಾಹ್ ತಂಡ ಭೇಟಿಗೂ ಮುನ್ನವೇ ಗೋವಾ ಸಿಎಂ ಟ್ವಿಟ್ ಮಾಡಿ, ವನ್ಯಜೀವಿ, ಪರಿಸರ, ಅರಣ್ಯ ಇಲಾಖೆ ಅನುಮತಿ ಇಲ್ಲದೇ ಕರ್ನಾಟಕ ಕಾಮಗಾರಿ ಆರಂಭಿಸಿದೆ ಎಂದು ಆರೋಪಿಸಿದ್ದರು. ಆದರೆ, ಕಾಮಗಾರಿ ‌ನಡೆದಿಲ್ಲವೆಂದು ಕೇಂದ್ರದ ತಂಡಕ್ಕೆ ರಾಜ್ಯ ನೀರಾವರಿ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಕ್ಕೂ ಮೊದಲು ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ ತಂಡ ಭೇಟಿ ನೀಡಿದ್ದು, ಬೆಳಗಾವಿಯ ಚೋರ್ಲಾ ಗಡಿಯಲ್ಲಿ ಆ ತಂಡವನ್ನು ನೀರಾವರಿ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಸ್ವಾಗತಿಸಿದರು.

Latest Videos
Follow Us:
Download App:
  • android
  • ios