ಹುಬ್ಬಳ್ಳಿ, (ಸೆ.9): ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶದ ಪ್ರತಿ ರವಾನೆ ಮಾಡಲಾಗಿದೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣ ಮತ್ತಷ್ಟು ಹೈಟೆಕ್‌: ಭದ್ರತೆಗೆ ಬರಲಿವೆ RPSF

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಲ್ಲದೆ ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್  ಅವರುಗಳಿಗೆ ಧನ್ಯವಾದ ಹೇಳಿದ್ದಾರೆ.

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಹೆಸರನ್ನು ಸಿದ್ದಾರೂಢ  ಸ್ವಾಮಿಜಿ ರೈಲ್ವೆ ನಿಲ್ದಾಣ, ಹುಬ್ಬಳ್ಳಿ ಎಂದು  ಬದಲಾಯಿಸಲು ಅನುಮೋದನೆ ನೀಡಿದ್ದಕ್ಕಾಗಿ ಗೃಹಸಚಿವ ಅಮಿತ್ ಶಾ ಹಾಗೂ ಪಿಯೂಷ್‌ಗೋಯಲ್ ಅವರಿಗೆ ಧನ್ಯವಾದಗಳು ಎಂದು ಟ್ವಿಟ್ ಮಾಡಿದ್ದಾರೆ