ಚೈತ್ರಾ ಕುಂದಾಪುರ ಬಂಧನ ಹಿಂದೆ ನಡೆದಿದೆ ಭಾರೀ ಷಡ್ಯಂತ್ರ; ಶ್ರೀರಾಮ ಸೇನೆ ಮುಖ್ಯಸ್ಥ ಗಂಭೀರ ಆರೋಪ

ಚೈತ್ರಾ ಕುಂದಾಪುರ ವಂಚನೆ ಮಾಡಿಲ್ಲ ಎಂಬ ನಂಬಿಕೆ ನನಗಿದೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಲಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚೈತ್ರಾ ಕುಂದಾಪುರ ಪರ ನಿಂತು ಅಚ್ಚರಿ ಮೂಡಿಸಿದ್ದಾರೆ.

Chaitra kundapur case issue shriram sene pramod mutalik reaction at dharwad rav

ಧಾರವಾಡ (ಸೆ.17) ಚೈತ್ರಾ ಕುಂದಾಪುರ ವಂಚನೆ ಮಾಡಿಲ್ಲ ಎಂಬ ನಂಬಿಕೆ ನನಗಿದೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಲಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚೈತ್ರಾ ಕುಂದಾಪುರ ಪರ ನಿಂತು ಅಚ್ಚರಿ ಮೂಡಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಹೀಗೆ ವಂಚಿಸಿರಲಿಕ್ಕಿಲ್ಲ. ಇದರಲ್ಲಿ ಏನೋ ಷಡ್ಯಂತ್ರ ನಡೆದಿದೆ ಸಂಪೂರ್ಣ ತನಿಖೆ ನಡೆದರೆ ಚೈತ್ರಾ ಕುಂದಾಪುರ ನಿರ್ದೋಷಿಯಾಗಿ ಹೊರಬರುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಗುಲಾಮಗಿರಿ ಹೆಸರು ಇಟ್ಟುಕೊಳ್ಳುವುದು ಅವಮಾನ, ‘ರಿಪಬ್ಲಿಕ್‌ ಆಫ್‌ ಭಾರತ’ ಹೆಸರು ಸ್ವಾಗತಾರ್ಹ: ಮುತಾಲಿಕ್‌

ಕಾಂಗ್ರೆಸ್ ಸರ್ಕಾರ ಬಂದನಂತರ ಹಿಂದು ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಹೆಚ್ಚಳವಾಗಿದೆ. ಈ ಪ್ರಕರಣದಲ್ಲೂ ಕೂಡ ಚೈತ್ರಾ ಕುಂದಾಪುರ ಮತ್ತು ಕಾರ್ಯಕರ್ತರನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ಮುಂದುವರಿದು, ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ನವರು ಬಜರಂಗದಳ ನಿಷೇಧ, ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಹೇಳಿದ್ದರು. ಇದೀಗ ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಷಡ್ಯಂತ್ರ ನಡೆದಿರುವುದು ಮೇಲ್ನೋಟ ಕಾಣಿಸುತ್ತಿದೆ. ಗೋರಕ್ಷಕ ಪುನೀತ್ ಕೆರೆಹಳ್ಳಿ ಮೇಲೆ ಸುಖಾಸುಮ್ಮನೆ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಇದೀಗ ಕಾಯ್ದೆ ರದ್ದಾಗಿ ಬಿಡುಗಡೆಯಾಗಿದ್ದಾರೆ. ಹಾಗಾದರೆ ಅವರವಿರುದ್ಧ ಸುಳ್ಳು ಕಾಯ್ದೆ ಹಾಕಿದವರಿಗೆ ಯಾವ ಶಿಕ್ಷೆ ಎಂದು ಪ್ರಶ್ನಿಸಿದ್ದಾರೆ.

ಚೈತ್ರಾ ಕುಂದಾಪುರ ಅಷ್ಟೇ ಅಲ್ಲ, ಕೆಲವು ಸ್ವಾಮೀಜಿಗಳ ವಿರುದ್ಧವೂ ವ್ಯವಸ್ಥಿತವಾಗಿ ಷಡ್ಯಂತ್ರ ನಡೆದಿದೆ. ತನಿಖೆ ಬಳಿಕ ನಿರ್ದೋಷಿಯಾಗಿ ಹೊರಬರುತ್ತಾರೆ ಎಂದರು.

 

ಉದಯನಿಧಿ ಇನ್ನೂ ಬಚ್ಚಾ, ಕಣ್ಣು ತೆರೆದು ಜಗತ್ತು ನೋಡಿಲ್ಲ: ಮುತಾಲಿಕ್‌

Latest Videos
Follow Us:
Download App:
  • android
  • ios