ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ದಿಢೀರ್‌ ಅಸ್ವಸ್ಥಳಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ನಾಟಕೀಯ ಬೆಳವಣಿಗೆ ನಡೆದಿದೆ. 

Chaitra Kundapur Health Normal All Test Reports Are Normal No Epilepsy Said Victoria Hospital Doctor gvd

ಬೆಂಗಳೂರು (ಸೆ.16): ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ದಿಢೀರ್‌ ಅಸ್ವಸ್ಥಳಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ನಾಟಕೀಯ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಗುರುವಾರ ಚೈತ್ರಾಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಟ್ಟಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಚೈತ್ರಾ ಶುಕ್ರವಾರ ಬೆಳಗ್ಗೆ ಎದ್ದು ಒಂದು ಗಂಟೆ ಯೋಗ ಹಾಗೂ ಧ್ಯಾನ ಮಾಡಿದ್ದಳು. 

ಬಳಿಕ ಸಿಸಿಬಿ ಪೊಲೀಸರು ಆಕೆಯನ್ನು ಸಿಸಿಬಿ ಕಚೇರಿಗೆ ಕರೆತಂದಿದ್ದರು. ಕೆಲ ಸಮಯದ ಬಳಿಕ ಚೈತ್ರಾ ಮೂರ್ಛೆರೋಗ ಬಂದವರ ಹಾಗೆ ಏಕಾಏಕಿ ಅಸ್ವಸ್ಥಳಾಗಿ ಬಾಯಲ್ಲಿ ನೊರೆ ಕಕ್ಕಿಕೊಂಡು ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸಿಸಿಬಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. ವೈದ್ಯರು ಚೈತ್ರಾಳನ್ನು ಎಲ್ಲಾ ಪರೀಕ್ಷೆಗಳಿಗೆ ಒಳಪಡಿಸಿದ್ದಾರೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಚೈತ್ರಾ ಮೂರ್ಛೆ ನಾಟಕ: ಮೂರ್ಛೆ ರೋಗ ಬಂದಿದೆ ಎಂದು ಚೈತ್ರಾ ಕುಂದಾಪುರ ಎಂಬಾಕೆಯನ್ನು ಸಿಸಿಬಿ ಪೊಲೀಸರು ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಇಸಿಜಿ, ಬಿಪಿ, ಶುಗರ್‌ ಎಲ್ಲವೂ ನಾರ್ಮಲ್‌ ಇದೆ. ಸಿಟಿ ಸ್ಕ್ಯಾನ್‌ ಸೇರಿದಂತೆ ಎಲ್ಲಾ ಪರೀಕ್ಷೆ ಮಾಡಲಾಗಿದೆ. ಮೂರ್ಛೆ ರೋಗದಿಂದ ಆಕೆ ಕುಸಿದು ಬಿದ್ದಿಲ್ಲ. ಆಕೆ ಬಾಯಲ್ಲಿ ನೊರೆ ಇರಲಿಲ್ಲ. ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆರೋಪಿ ಚೈತ್ರಾ ಸಿಸಿಬಿ ಪೊಲೀಸರ ವಿಚಾರಣೆ ತಪ್ಪಿಸಿಕೊಳ್ಳಲು ಮೂರ್ಛೆ ನಾಟಕ ಮಾಡಿದ್ದಾಳೆ ಎನ್ನಲಾಗಿದೆ.

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?

ಚೈತ್ರಾಳಿಗೆ ಈ ಹಿಂದೆ ಮೂರ್ಛೆ ರೋಗ ಇತ್ತು. ಸಾರ್ವಜನಿಕ ಭಾಷಣದ ವೇಳೆ ಮೂರ್ಛೆ ಹೋಗಿದ್ದಳು ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಖಚಿತತೆ ಇಲ್ಲ. ವಿಚಾರಣೆ ವೇಳೆ ಆಕೆಗೆ ಮೂರ್ಛೆ ಬಂದಿರಲಿಲ್ಲ. ಬದಲಾಗಿ ಆಕೆ ಮೂರ್ಛೆ ಹೋದ ಹಾಗೆ ನಟಿಸಿ ಡ್ರಾಮ ಸೃಷ್ಟಿಸಿದ್ದಾಳೆ. ಸಿಸಿಬಿ ಪೊಲೀಸರು ಶನಿವಾರ ಆಕೆಯ ಆರೋಗ್ಯ ಚೇತರಿಕೆ ನೋಡಿಕೊಂಡು ಮತ್ತೆ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಲಿದ್ದಾರೆ ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios