ಜ್ಯೋತಿಗೌಡನಪುರದಲ್ಲಿ ಬುದ್ಧ ಪ್ರತಿಮೆ ದ್ವಂಸ ಮತ್ತು ಅಂಬೇಡ್ಕರ್ ಭಾವಚಿತ್ರ ವಿರೂಪಗೊಳಿಸಿದ ಪ್ರಕರಣದಲ್ಲಿ ಪೊಲೀಸರು ನಿರಪರಾಧಿಯನ್ನು ಬಂಧಿಸಿದ್ದಾರೆ ಎಂದು ಆರೋಪಿಸಿ ನಾಯಕ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ. ನೈಜ ಆರೋಪಿಗಳನ್ನು ಬಂಧಿಸಿ, ಬಂಧಿತ ಅಮಾಯಕನನ್ನು ಬಿಡುಗಡೆ ಮಾಡುವಂತೆ ಸಮುದಾಯ ಆಗ್ರಹಿಸಿದೆ.

ಚಾಮರಾಜನಗರ, (ನ. 15): ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರದಲ್ಲಿ ಅ.23 ರಂದು ನಡೆದ ಬುದ್ಧ ಪ್ರತಿಮೆಯ ದ್ವಂಸ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ವಿರೂಪಗೊಳಿಸಿದ ಪ್ರಕರಣದಲ್ಲಿ ಅಮಾಯಕರನ್ನು ಬಂದಿಸಿದ ಆರೋಪ ಕೇಳಿಬಂದಿದ್ದು, ನಾಯಕ ಸಮುದಾಯದ ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿರಪರಾಧಿಯ ಬಂಧನ?

ಪ್ರಕರಣದಲ್ಲಿ ಆರೋಪಿಯನ್ನು ಬಿಟ್ಟು ಪೊಲೀಸರು ನಿರಪರಾಧಿಯನ್ನು ಬಂಧಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿರುವ ನಾಯಕ ಸಮುದಾಯದವರು, ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ, ಪ್ರತಿಭಟನೆ ವೇಳೆ 'ನಿರಪರಾಧಿಯನ್ನು ಬಿಡುಗಡೆ ಮಾಡಿ, ನೈಜ ಆರೋಪಿಗಳನ್ನು ಬಂಧಿಸಿ' ಎಂದು ಘೋಷಣೆ ಕೂಗಿ ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಾಯಕ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಹುನ್ನಾರ?

ಈ ಪ್ರಕರಣದಲ್ಲಿ ನಾಯಕ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಬಂಧಿಸಿ, ಸಮುದಾಯಕ್ಕೆ ತರಲು ಹುನ್ನಾರ ನಡೆಸಿದ್ದಾರೆ ಎಂದು ಸಮುದಾಯದವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ 'ಸಾಕ್ಷಿ ಹೇಳುವಂತೆ ಪೊಲೀಸರು ಅಮಾಯಕರ ಮೇಲೆ ದೈಹಿಕವಾಗಿ ಕಿರುಕುಳ ನೀಡಿರುವ ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡುವಂತೆ ಒತ್ತಾಯಿಸಿದರು. ನಮ್ಮ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.