ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರ ಮೇ 2ರಂದು ನಡೆದ ಆಮ್ಲಜನಕ ದುರಂತದಲ್ಲಿ ಮೃತಪಟ್ಟ 25 ಮಂದಿಯ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರವು ಅದೇ ಆಸ್ಪತ್ರೆಯಲ್ಲಿ ಕಾಯಂ ಉದ್ಯೋಗ ನೀಡಿದೆ. ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ವೇಳೆ ಸಂಭವಿಸಿದ್ದ ಆಮ್ಲಜನಕ ದುರಂತದಿಂದ ಮೃತಪಟ್ಟವರ ಪೈಕಿ 25 ಮಂದಿಯ ಕುಟುಂಬದವರಿಗೆ ರಾಜ್ಯ ಸರ್ಕಾರ ಅದೇ ಜಿಲ್ಲಾಸ್ಪತ್ರೆಯಲ್ಲಿ ಕಾಯಂ ಉದ್ಯೋಗ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಂಡ್ಲುಪೇಟೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿತರಣೆ ಮಾಡಿದರು. 2021ರ ಮೇ 2ರಂದು ಈ ದುರಂತ ಸಂಭವಿಸಿತ್ತು. ಮೃತರ ಕುಟುಂಬ ವರ್ಗಕ್ಕೆ ಕಾಯಂ ಉದ್ಯೋಗ ನೀಡುವುದಾಗಿ ಭಾರತ್‌ ಜೋಡೋ ಯಾತ್ರೆ ವೇಳೆ ರಾಹುಲ್‌ ಗಾಂಧಿ ಅವರು ಭರವಸೆ ನೀಡಿದ್ದರು.

ಕೊನೆಗೂ ನ್ಯಾಯ ಸಿಕ್ತು

ಕೊರೊನಾ ವೇಳೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳು ನ್ಯಾಯಕ್ಕಾಗಿ ನಿರಂತರ ಹೋರಾಟಕ್ಕೆ ಮಾಡುತ್ತ ಬಂದಿದ್ದರು. ಇದೀಗ ಕೊನೆಗೂ ನ್ಯಾಯ ಸಿಕ್ಕಿದೆ. 5 ವರ್ಷಗಳ ಬಳಿಕ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಅದೇ ಆಸ್ಪತ್ರೆಯಲ್ಲಿ ಸರ್ಕಾರಿ ಕೆಲಸ ನೀಡಿದೆ.

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೋನಾ ಸಮಯದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. ಅಂದು ಉಂಟಾದ ಆಘಾತ ಮತ್ತು ನೋವು ಇನ್ನೂ ಕುಟುಂಬಗಳನ್ನು ಕಾಡುತ್ತಿದ್ದು, ಜೀವನೋಪಾಯಕ್ಕಾಗಿ ಅವರು ಕಳೆದ ಐದು ವರ್ಷಗಳಿಂದ ಕಷ್ಟಗಳನ್ನು ಎದುರಿಸುತ್ತಿದ್ದರು.