ಸುಳ್ವಾಡಿ ವಿಷ ಪ್ರಸಾದ ಪ್ರಕರಣ:ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ! ಏನಿದು ಪ್ರಕರಣ?
: ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ. ಏನಿದು ಪ್ರಕರಣ?
ವರದಿ - ಪುಟ್ಟರಾಜು. ಆರ್. ಸಿ. ಏಷಿಯಾನೆಟ್ ಸುವರ್ಣ ನ್ಯೂಸ್ , ಚಾಮರಾಜನಗರ.
ಚಾಮರಾಜನಗರ (ನ.21): ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ.
ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ನ್ಯಾಯಾಧೀಶೆ ಬಿ.ಎಸ್ ಭಾರತಿ ರವರು ವಜಾಗೊಳಿಸಿದ್ದಾರೆ. ಈಗಾಗಲೆ ಜಾಮೀನು ಕೋರಿ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳಲ್ಲು ಕೂಡ ಸಲ್ಲಿಸಿದ್ದ ಅರ್ಜಿ ವಜಾ ಆಗಿತ್ತು. ಆದರೆ ಈಗ ಅನಾರೋಗ್ಯದ ಕಾರಣ ನೀಡಿ ಮತ್ತೆ ಜಿಲ್ಲಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಅಲ್ಲಿಸಿದ್ದ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಅರ್ಜಿಯನ್ನು ಚಾಮರಾಜನಗರ ಜಿಲ್ಲಾ ನ್ಯಾಯಾಲಯ ವಜಾ ಮಾಡಿದೆ.
ಚಾಮರಾಜನಗರ ಪೊಲೀಸರ ನಿದ್ದೆಗೆಡಿಸಿದ್ದ ಕಳ್ಳರ ಗ್ಯಾಂಗ್ ಅಂಧರ್: ನಾಲ್ವರು ಖತರ್ನಾಕ್ ಖದೀಮರು ಅರೆಸ್ಟ್
ಕಳೆದ 5 ವರ್ಷ 11 ತಿಂಗಳಿಂದ ಜೈಲಿನಲ್ಲಿರುವ ಇಮ್ಮಡಿ ಮಹದೇವಸ್ವಾಮಿ ಮಹದೇಶ್ವರ ಬೆಟ್ಟ ಸಾಲೂರು ಮಠದ ಕಿರಿಯ ಸ್ವಾಮೀಜಿ ಆಗಿದ್ದ ಸಂದರ್ಭದಲ್ಲಿ ಸುಳ್ವಾಡಿ ಕಿಚ್‌ಗುತ್ ಮಾರಮ್ಮ ದೇವಸ್ಥಾನದ ಆಡಳಿತದಲ್ಲಿ ಅಧಿಪತ್ಯ ಸ್ಥಾಪಿಸಲು ಪಿತೂರಿ ಮಾಡಿ ಮತ್ತೊಂದು ಗುಂಪಿಗೆ ಕೆಟ್ಟ ಹೆಸರು ತರಲು ಪ್ರಸಾದಕ್ಕೆ ವಿಷ ಬೆರೆಸಿ ಪ್ರಸಾದ ವಿತರಿಸಿದ ಘಟನೆಯಲ್ಲಿ 17 ಮಂದಿ ಭಕ್ತರು ಮೃತಪಟ್ಟಿದ್ದರು, 127 ಮಂದಿ ಅಸ್ವಸ್ಥಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿ, ಎರಡನೇ ಆರೋಪಿ ಅಂಬಿಕಾ, ಮೂರನೇ ಆರೋಪಿ ದೇವಸ್ಥಾನದ ವ್ಯವಸ್ಥಾಪಕ ಮಾದೇಶ್, ನಾಲ್ಕನೇ ಆರೋಪಿ ತಂಬಡಿ ದೊಡ್ಡಯ್ಯ ಸದ್ಯ ಮೈಸೂರು ಜೈಲಿನಲ್ಲಿದ್ದಾರೆ.