ಭಾಷೆ ಪ್ರೋತ್ಸಾಹ ಸಮಿತಿಗೆ ಚಮೂ ಕೃಷ್ಣಶಾಸ್ತ್ರಿ ಅಧ್ಯಕ್ಷ

  • ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರ ಸೋಮವಾರ ರಚಿಸಿರುವ ಉನ್ನತಾಧಿಕಾರದ ಸಮಿತಿ
  • ಸಮಿತಿಗೆ ಪದ್ಮಶ್ರೀ ಪುರಸ್ಕೃತ, ದಕ್ಷಿಣ ಕನ್ನಡದ ಬಂಟ್ವಾಳ ಮೂಲದ ಚಮೂ ಕೃಷ್ಣಶಾಸ್ತ್ರಿ ಅವರು ಅಧ್ಯಕ್ಷರಾಗಿ ನಿಯುಕ್ತಿ
Chamu Krishnasastri Chairperson for Language Promotion Committee snr

ನವದೆಹಲಿ (ನ.16): ಭಾರತೀಯ ಭಾಷೆಗಳ (India language)  ಉನ್ನತಿಗಾಗಿ ಕೇಂದ್ರ ಸರ್ಕಾರ (Central govt) ಸೋಮವಾರ ರಚಿಸಿರುವ ಉನ್ನತಾಧಿಕಾರದ ಸಮಿತಿಗೆ ಪದ್ಮಶ್ರೀ (padmshri) ಪುರಸ್ಕೃತ, ದಕ್ಷಿಣ ಕನ್ನಡದ (Dakshina kannada) ಬಂಟ್ವಾಳ (Bantwal) ಮೂಲದ ಚಮೂ ಕೃಷ್ಣಶಾಸ್ತ್ರಿ (Cha mu Krishnashastri) ಅವರು ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ.

ಈ ಕೃಷ್ಣಶಾಸ್ತ್ರಿ ಕೇಂದ್ರೀಯ ಸಂಸ್ಕೃತ ಮಂಡಳಿ (sanskrit Board), ಎನ್‌ಸಿಇಆರ್‌ಟಿ (NCERT), ಸಿಬಿಎಸ್‌ಇ (CBSE), ಯುಜಿಸಿ (UGC) ಸೇರಿದಂತೆ ಹಲವು ಸಮಿತಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಭಾಷೆಗಳಲ್ಲದೆ, ಅಪಾಯದ ಅಂಚಿನಲ್ಲಿರುವ ಭಾಷೆಗಳು, ಪರಿಚ್ಛೇದದಲ್ಲಿ ಇಲ್ಲದ ಭಾಷೆಗಳು, ಅಲ್ಪ ಸಂಖ್ಯಾತ, ಬುಡಕಟ್ಟು (Tribes) ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾಗಿ ಈ ಸಮಿತಿಯು ಕೆಲಸ ಮಾಡಲಿದೆ.

ಸಮಿತಿಯು ಎರಡು ವರ್ಷಗಳ ಅವಧಿಯಲ್ಲಿ ಸೂಕ್ತ ಸಮಿತಿ/ ಉಪ ಸಮಿತಿಗಳನ್ನು ರಚಿಸಿ, ಕಾರ್ಯಕ್ರಮಗಳನ್ನು ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ (State Govt) ಭಾಷಾ ಸಂಬಂಧೀ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಸೂಕ್ತವಾದ ಕ್ರಿಯಾ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆಯನ್ನು ಹೊಂದಿದೆ.

ಕೇಂದ್ರ ಶಿಕ್ಷಣ ಇಲಾಖೆಯ (Central Education Department) ಜಂಟಿ ಕಾರ್ಯದರ್ಶಿ (ಭಾಷೆಗಳು), ಮೈಸೂರಿನ (Mysuru) ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರು ಮತ್ತು ಈ ಸಮಿತಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವ ಹೊಣೆಗಾರಿಕೆ ಇರುವ ದಿಲ್ಲಿಯ (Delhi) ಲಾಲ್‌ ಬಹಾದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿವಿ ಕುಲಪತಿಗಳು ಪದನಿಮಿತ್ತ ಸದಸ್ಯರಾಗಿರುವ ಈ ಸಮಿತಿಗೆ ತಜ್ಞ ಸದಸ್ಯರನ್ನು ಕಾಲಾನುಕ್ರಮದಲ್ಲಿ ಸಮಿತಿಯ ಅಧ್ಯಕ್ಷರ ಶಿಫಾರಸಿನಂತೆ ನೇಮಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪದವಿಯಲ್ಲಿ ಕನ್ನಡ ಕಡ್ಡಾಯ ವಿಚಾರ  : 

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯದ ಪದವಿ ಕಾಲೇಜುಗಳಲ್ಲಿ (College) ಕನ್ನಡ (kannada) ಕಲಿಕೆ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಿಲುವಿಗೆ ಮತ್ತೊಮ್ಮೆ ಆಕ್ಷೇಪಿಸಿರುವ ಹೈಕೋರ್ಟ್‌, ಶಿಕ್ಷಣದಲ್ಲಿ (Education) ರಾಜಕೀಯವನ್ನು (Politics) ಏಕೆ ಬೆರೆಸುತ್ತೀರಿ ಎಂದು ಕಟುವಾಗಿ ಪ್ರಶ್ನಿಸಿದೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ (Kannada) ಕಲಿಸಬಹುದು ಎಂದಿದ್ದರೆ ಅದಕ್ಕೆ ದಾಖಲೆ ತೋರಿಸಿ ಎಂದೂ ನಿರ್ದೇಶಿಸಿದೆ.

ಪದವಿ ಕಾಲೇಜುಗಳಲ್ಲಿ(Degree College) ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರಿನ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್‌ (Sanskrith Bharthi Karnataka trust) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ರಾಜ್ಯ ಸರ್ಕಾರಿ ವಕೀಲರು ಹಾಜರಾಗಿ, ಉನ್ನತ ಶಿಕ್ಷಣದಲ್ಲಿ (Higher education) ಕೇವಲ ಆರು ತಿಂಗಳ ಕಾಲ ಬೇಸಿಕ್‌ ಕನ್ನಡ ಕಲಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ (national education Policy) ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸಬಹುದು ಎಂದು ನ್ಯಾಯಾಲಯಕ್ಕೆ ವಿವರಿಸಿದರು. ಜತೆಗೆ, ಸರ್ಕಾರದ ನೀತಿಯನ್ನು ಸಮರ್ಥಿಸಿಕೊಂಡು ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸೋಮವಾರಕ್ಕೆ ಅರ್ಜಿ ವಿಚಾರಣೆ ಮುಂದೂಡುವಂತೆ ನ್ಯಾಯಪೀಠವನ್ನು ಕೋರಿದರು.

ಇದಕ್ಕೆ ಆಕ್ಷೇಪಿಸಿದ ನ್ಯಾಯಾಲಯ, ಕಡ್ಡಾಯ ಕಲಿಕೆ ನಿಲುವಿನ ಕುರಿತು ಸರ್ಕಾರಕ್ಕೆ ಸಲಹೆ ನೀಡುವುದಾಗಿ ಅಡ್ವೋಕೇಟ್‌ ಜನರಲ್‌ ಕಳೆದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ ಈಗ ನಿಮ್ಮ ನೀತಿಯನ್ನು ಸಮರ್ಥಿಸಿಕೊಳ್ಳುತ್ತೀದ್ದೀರಿ. ಹಾಗಾದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವು ಏನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ತಾಕೀತು ಮಾಡಿತು.

ಈ ವೇಳೆ ವಾದ ನಡೆಸಿದ ಅರ್ಜಿದಾರರ ಪರ ಹಿರಿಯ ವಕೀಲ ನಾಗಾನಂದ್‌, ಉನ್ನತ ಶಿಕ್ಷಣ ವ್ಯಾಸಂಗದಲ್ಲಿ ಕಡ್ಡಾಯವಾಗಿ ಕನ್ನಡ ಕಲಿಯಬೇಕೆಂಬ ಅಂಶ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇಲ್ಲ. ತನಗೆ ಇಷ್ಟಬಂದ ಯಾವುದೇ ವಿಷಯ ಅಥವಾ ಕೋರ್ಸ್‌ ಅಧ್ಯಯನ ಮಾಡುವ ಸಂಪೂರ್ಣ ಸ್ವಾತಂತ್ರ್ಯವನ್ನು ವಿದ್ಯಾರ್ಥಿಗೆ ನೀಡಲಾಗಿದೆ ಎಂದರು.

ಇದಕ್ಕೆ ಸರ್ಕಾರಿ ವಕೀಲರು, ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸುವುದನ್ನು ಸುಪ್ರೀಂಕೋರ್ಟ್‌ ಪುರಸ್ಕರಿಸಿದೆ ಎಂದು ಸಮರ್ಥಿಸಿಕೊಂಡಾಗ ಈ ಬಗೆಗಿನ ದಾಖಲೆಗಳನ್ನು ನೀಡಿ ಎಂದು ನ್ಯಾಯಪೀಠ ಹೇಳಿತು. ಜತೆಗೆ, ಉನ್ನತ ಶಿಕ್ಷಣ ಪಡೆಯಲು ಕರ್ನಾಟಕಕ್ಕೆ ಬಂದ ಹೊರರಾಜ್ಯದ ವಿದ್ಯಾರ್ಥಿಗಳ ಪೈಕಿ ಕನ್ನಡ ಕಲಿಯಬೇಕೆಂಬ ಕಾರಣಕ್ಕೆ ಹಿಂದಿರುಗಿರುವವರ ಸಂಖ್ಯೆ ಎಷ್ಟುಎಂಬುದು ನಿಮಗೆ ಗೊತ್ತಿದೆಯೇ? ಶಿಕ್ಷಣದಲ್ಲಿ ರಾಜಕೀಯವನ್ನು ಏಕೆ ಬೆರೆಸುತ್ತೀರಿ ಎಂದು ಖಾರವಾಗಿ ಪ್ರಶ್ನಿಸಿತು.

ಸರ್ಕಾರಿ ವಕೀಲರು ಉತ್ತರಿಸಿ, ಈಗಾಗಲೇ ಪಠ್ಯಪುಸ್ತಕ ಪೂರೈಲಾಗಿದೆ. ಕೇವಲ ಆರು ತಿಂಗಳ ಕಾಲ ಸಣ್ಣ ಸಣ್ಣ ಕನ್ನಡದ ಪದಗಳನ್ನು ಕಲಿಯಲು ಹೇಳಿ ಕೊಡಲಾಗುತ್ತದೆಯಷ್ಟೇ. ಮೊದಲನೇ ತರಗತಿ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಪಠ್ಯ ಬೋಧಿಸಲಾಗುತ್ತದೆ. ಇದು ಕೇವಲ ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸುವ ವಿಧಾನವಾಗಿದೆ. ರಾಜ್ಯದಲ್ಲಿ ನೆಲೆಸುವವರಿಗೆ ಸ್ಥಳೀಯರೊಂದಿಗೆ ಚರ್ಚಿಸಲು ಅನುಕೂಲವಾಗಷ್ಟುಕನ್ನಡ ಕಲಿಸಲಾಗುತ್ತದೆ. ಈ ಕ್ರಮವನ್ನು ಉಷಾ ಮೆಹ್ತಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಸಹ ಅನುಮೋದಿಸಿದೆ. ಅಲ್ಲದೆ, ಇದೇ ಮೊದಲ ಬಾರಿಗೆ ಈ ವಿಧಾನ ಪರಿಚಯಿಸುತ್ತಿಲ್ಲ. ಕಳೆದ 10 ವರ್ಷಗಳಿಂದ ಎಂಜಿನಿಯರ್‌ ವ್ಯಾಸಂಗದಲ್ಲಿ ಕನ್ನಡ ಕಲಿಯುವ ವಿಧಾನ ಪರಿಚಯಿಸಲಾಗಿದೆ. ಇದು 10ನೇ ತರಗತಿ ನಂತರ ಕನ್ನಡ ವಿಷಯವನ್ನು ವ್ಯಾಸಂಗ ಮಾಡದವರಿಗೆ ಕನ್ನಡ ಕಲಿಯಲು ಅನುಕೂಲವಾಗಿದೆ. ಈ ವಿಧಾನ ಯಶಸ್ವಿ ಸಹ ಆಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ನಂತರ ರಾಜ್ಯ ಸರ್ಕಾರದ ಆಕ್ಷೇಪಣೆ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ ನ್ಯಾಯಪೀಠ, ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಅವರು ವಾದ ಮಂಡಿಸಲು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ (ನ.15) ಮುಂದೂಡಿತು.

Latest Videos
Follow Us:
Download App:
  • android
  • ios