ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳನ್ನು ಭೇಟಿಯಾಗಲು ಆಗಸ್ಟ್ 26 ರಂದು ಗ್ರೀಸ್‌ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರು (ಆ.24): ಚಂದ್ರಯಾನ-3 ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಬ್ರಿಕ್ಸ್ ಸಮ್ಮೇಳನದ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಿಕ್ರಮ್ ಲ್ಯಾಂಡರ್‌ನ ಲ್ಯಾಂಡಿಂಗ್ ಪ್ರಕ್ರಿಯೆಗೆ ಕೂಡಿಕೊಂಡಿದ್ದರು. ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ಗ್ರೀಸ್‌ಗೆ ತೆರಳಲಿರುವ ಪ್ರಧಾನಿ ಮೋದಿ ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪೀಣ್ಯದಲ್ಲಿರುವ ಇಸ್ರೋನ ಟೆಲಿಮೆಟ್ರಿ, ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ಅಂದರೆ ಇಸ್ಟ್ರಾಕ್‌ಗೆ ಶನಿವಾರ ಮೋದಿ ಭೇಟಿ ನೀಡಲಿದ್ದಾರೆ ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೇತೃತ್ವದಲ್ಲಿ ಗುರುವಾರ ಸಭೆ ನಡೆದಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರು,ಡಿಸಿಪಿ ಹಾಗೂ ಜಂಟಿ ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗಿಯಾಗಿದ್ದರು. ಪ್ರಧಾನಿ ಮೋದಿ ಭದ್ರತೆ ಕುರಿತು ಇವರು ಚರ್ಚೆ ನಡೆಸಿದ್ದಾಋಏ. ಹೆಚ್ ಎಎಲ್ ವಿಮಾನ ನಿಲ್ಧಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಇಸ್ರೋ ಕಚೇರಿಗೆ ತೆರಳಲಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸರು ಭಾರೀ ಭದ್ರತೆ ಕೈಗೊಳ್ಳಲಿದ್ದಾರೆ. ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ಇಸ್ರೋಗೆ ತೆರಳಿದ್ದಾರೆ. ಹೀಗಾಗಿ ಪ್ರಧಾನಿ ಸಂಚಾರಿಸೋ ಮಾರ್ಗದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆಯಲ್ಲಿ ಚರ್ಚೆ ನಡೆದಿದೆ.
ಮೋದಿ ಆಗಮನದ ಹಿನ್ನಲೆಯಲ್ಲಿ ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆಯನ್ನೂ ಪೊಲೀಸರು ಮಾಡಿದ್ದಾರೆ. ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರ ವರೆಗೆ ಈ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೋಲಿಸರ ಮನವಿ ಮಾಡಲಾಗಿದೆ. ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ,ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್), ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್,ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ), ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ)ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಿಂತ ಪರ್ಯಾಯ ಮಾರ್ಗವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.
ಯೂಟ್ಯೂಬ್ ಇತಿಹಾಸದಲ್ಲಿಯೇ ಗರಿಷ್ಠ ವೀಕ್ಷಣೆ ಕಂಡ Top-10 ಲೈವ್ ಸ್ಟ್ರೀಮ್, ಇಲ್ಲಿಯೂ ಇಸ್ರೋ ದಾಖಲೆ!
ಭಾರೀ ಸರಕು ಸಾಗಾಣಿಕೆ (Heavy Goods Vehicles) ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 26ರ ಬೆಳಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಷೇಧ ವಿಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.
Chandrayaan 3: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡಿಂಗ್, ಕೊನೇ ಕ್ಷಣದ ವಿಡಿಯೋ ರಿಲೀಸ್ ಮಾಡಿದ ಇಸ್ರೋ!
