ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವಂತೆ ಡಿಕೆ ಸುರೇಶ್ ಕಾರಿಗೆ ಕೈಕಾರ್ಯಕರ್ತರು ಮುತ್ತಿಗೆ!

ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅವರೇ ಸ್ಪರ್ಧಿಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರು ಅಡ್ಡಗಟ್ಟಿ ಮುತ್ತಿಗೆ ಹಾಕಿದ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಆದರೆ ಡಿಕೆ ಸುರೇಶ್ ಸ್ಪರ್ಧೆಗೆ ಒಪ್ಪಿಕೊಂಡಿಲ್ಲ ಬದಲಾಗಿ ಬೇರೆ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಚಿಂತಿಸಲಾಗಿದೆ.

Channapatna by-election 2024 Congress workers urge former MP DK Suresh to contest rav

ಚನ್ನಪಟ್ಟಣ (ಜೂ.11): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಸಾಮಾನ್ಯ ಕಾರ್ಯಕರ್ತನಾಗಿ, ಪಕ್ಷಕ್ಕಾಗಿ ದುಡಿಯುತ್ತೇನೆ. ನಮ್ಮ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ ಎಂದು ಡಿಕೆ ಸುರೇಶ್ ಹೇಳಿಕೆ ನೀಡಿದ ಬೆನ್ನಲ್ಲೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ನೀವೇ ಸ್ಪರ್ಧಿಸಬೇಕು ಎಂದು ಡಿಕೆ ಸುರೇಶ್ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.

 ಚನ್ನಪಟ್ಟಣದಲ್ಲಿ ನಿರೀಕ್ಷೆಗೂ ಮತದಾನ ಮಾಡಿದ್ದೇವೆ. ಕ್ಷೇತ್ರದಲ್ಲಿ ನೀವು ಸ್ಪರ್ಧೆ ಮಾಡಿದರೆ  ಮತ್ತಷ್ಟು ಪಕ್ಷ ಸಂಘಟನೆ ಮಾಡಲು ಸಾಧ್ಯವಾಗುತ್ತೆ. ಬೇರೆ ಯಾರೂ ಇಲ್ಲಿ ಸ್ಪರ್ಧೆ ಮಾಡಲು ನಾವು ಒಪ್ಪಲ್ಲ, ಇಲ್ಲಿಂದ ನೀವೇ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿರುವ ಕಾರ್ಯಕರ್ತರು.

ಚನ್ನಪಟ್ಟಣ ಉಪಚುನಾವಣೆ : ಕೈನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕೆ

ಕೃತಜ್ಞತಾ ಸಭೆ ಮುಗಿಸಿ ಹೊರಟಿದ್ದ ವೇಳೆ  ಡಿ.ಕೆ.ಸುರೇಶ್ ಕಾರು ಅಡ್ಡಗಟ್ಟಿದ ಕಾರ್ಯಕರ್ತರು ಇಲ್ಲೇ ಸ್ಪರ್ಧಿಸುವಂತೆ ಒತ್ತಡ ಹೇರಿದ್ದರು. ಆದರೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ಆಘಾತದಿಂದ ಡಿಕೆ ಸುರೇಶ್ ಇನ್ನೂ ಹೊರಬಂದಿಲ್ಲ. ಹೀಗಿರುವಾಗ ಮತ್ತೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನವಿದೆ. ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಈ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಸುರೇಶ್ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ.

Latest Videos
Follow Us:
Download App:
  • android
  • ios