ರಾಜ್ಯದ ಎಲ್ಲ ಗೋಶಾಲೆಯಲ್ಲಿ ಚೆಕ್‌ಡ್ಯಾಂ: ಸಚಿವ ಪ್ರಭು ಚವ್ಹಾಣ್‌

ನೀರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಅಂತರ್ಜಲ ವೃದ್ಧಿ ಮತ್ತು ಮೇವು ಬೆಳೆಯಲು ತೊಂದರೆಯಾಗದಂತೆ ರಾಜ್ಯದ ಪ್ರತಿ ಸರ್ಕಾರಿ ಗೋಶಾಲೆಗಳಲ್ಲಿ ಚೆಕ್‌ ಡ್ಯಾಂ ನಿರ್ಮಿಸಲು ಕ್ರಮ ವಹಿಸುವಂತೆ ಪಶುಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

Checkdam in all Go Shala of the state Says minister prabhu chauhan gvd

ಬೆಂಗಳೂರು (ಫೆ.13): ನೀರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಅಂತರ್ಜಲ ವೃದ್ಧಿ ಮತ್ತು ಮೇವು ಬೆಳೆಯಲು ತೊಂದರೆಯಾಗದಂತೆ ರಾಜ್ಯದ ಪ್ರತಿ ಸರ್ಕಾರಿ ಗೋಶಾಲೆಗಳಲ್ಲಿ ಚೆಕ್‌ ಡ್ಯಾಂ ನಿರ್ಮಿಸಲು ಕ್ರಮ ವಹಿಸುವಂತೆ ಪಶುಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರತಿ ಗೋಶಾಲೆಗಳಲ್ಲಿ ಚೆಕ್‌ ಡ್ಯಾಂ ನಿರ್ಮಿಸುವುದರಿಂದ ಮಳೆ ನೀರು ಸಂಗ್ರಹಿಸಿ, ಮೇವು ಬೆಳೆಯಲು ಸಹಕಾರಿಯಾಗಲಿದೆ. ಚೆಕ್‌ ಡ್ಯಾಂ ನಿರ್ಮಾಣ ಪದ್ಧತಿ ಅಳವಡಿಸಿಕೊಂಡರೆ ನೀರಿಗೆ ತೊಂದರೆಯಾಗುವುದಿಲ್ಲ. ಜತೆಗೆ ಅಂತರ್ಜಲ ವೃದ್ಧಿಯಾಗಲಿದ್ದು, ಸದಾ ಹಸಿರಿನ ವಾತಾವರಣ ನಿರ್ಮಾಣ ಹಾಗೂ ಮೇವು ಉತ್ಪಾದನೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಜೀವ ವೈವಿಧ್ಯ ಗೋ ಫಾಮ್‌ರ್‍ಗೆ ಭೇಟಿ ನೀಡಿದ್ದ ಸಮಯದಲ್ಲಿ ಅಲ್ಲಿ ಚೆಕ್‌ ಡ್ಯಾಂ ನಿರ್ಮಿಸಿರುವುದರಿಂದ ಗೋವುಗಳ ಸಾಕಾಣಿಕೆ, ಮೇವು ಉತ್ಪಾದನೆ, ಗೋವಿನ ಉತ್ಪನ್ನಗಳ ಜತೆಗೆ ಉಪ ಉತ್ಪನ್ನಗಳ ತಯಾರಿಕೆಗೆ ಅನುಕೂಲವಾಗುತ್ತದೆ ಎನ್ನುವುದನ್ನು ಮನಗಂಡು ಪ್ರಾಯೋಗಿಕವಾಗಿ ಬೆಳಗಾವಿ ಜಿಲ್ಲೆಯ ಬೆಳವಿ ಸರ್ಕಾರಿ ಗೋಶಾಲೆಯಲ್ಲಿ ಚೆಕ್‌ ನಿರ್ಮಾಣ ಮಾಡಿರುವುದು ಯಶಸ್ವಿಯಾಗಿದೆ. ಹೀಗಾಗಿ ಚೆಕ್‌ ಡ್ಯಾಂ ನಿರ್ಮಾಣಗಳನ್ನು ರಾಜ್ಯದ ಎಲ್ಲಾ ಗೋಶಾಲೆಗಳಲ್ಲಿ ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದಿದ್ದಾರೆ.

ಜನರ ಋುಣ ತೀರಿ​ಸಲು ಪ್ರಾಮಾ​ಣಿಕ ಸೇವೆ: ಯಡಿ​ಯೂ​ರ​ಪ್ಪ

ಗ್ರಾಮೀಣಾಭಿವೃದ್ಧಿ ಇಲಾಖೆಯು ನರೇಗಾ ಯೋಜನೆಯಡಿ ರಾಜ್ಯದ ಸರ್ಕಾರಿ ಗೋಶಾಲೆಗಳಲ್ಲಿ ಚೆಕ್‌ ಡ್ಯಾಂ ಮತ್ತು ನೀರಿನ ತೊಟ್ಟಿನಿರ್ಮಾಣ ಕುರಿತು ಪಶು ಸಂಗೋಪನೆ ಇಲಾಖೆಯ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರುಗಳು ಆಯಾ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಸಂಪರ್ಕಿಸಿ ಗೋಶಾಲೆಗಳಲ್ಲಿ ಚೆಕ್‌ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

Latest Videos
Follow Us:
Download App:
  • android
  • ios