ಚೆನ್ನೖ, [ಡಿ.07]: ನಡೆದಾಡುವ ದೇವರು, ಅಕ್ಷರ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ಕಳೆದ ಮೂರ್ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಂದು [ಶುಕ್ರವಾರ] ಚೆನ್ನೖಗೆ ಕರೆದೊಯ್ಯಲಾಗಿದೆ.

ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದ್ದು, ನುರಿತ ಸರ್ಜನ್ ಡಾ.ಮಹಮದ್ ರೇಲಾ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಸ್ವಸ್ಥ ಅಕ್ಷರ ದಾಸೋಹಿಗೆ ಚೆನ್ನೈನಲ್ಲಿ ಚಿಕಿತ್ಸೆ

ಇನ್ನು ರೇಲಾ ಆಸ್ಪತ್ರೆ ಶಿವಕುಮಾರ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಪಿತ್ತಕೋಶ ಸಂಬಂಧಿ ಸಮಸ್ಯೆಗಳಿಂದ ಶ್ರೀಗಳು ಬಳಲುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಈ ಹಿಂದೆ ಕೂಡ ಹಲವು ಬಾರಿ ಎಂಡೋಸ್ಕೋಪಿಗೆ ಮೊರೆ ಹೋಗಿದ್ರು. ಪ್ರಸ್ತುತ ಕೂಡ ಶ್ರೀಗಳ ಆರೋಗ್ಯ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಮೂರ್ನಾಲ್ಕು ದಿನ ರೇಲಾ ಇನ್ಸ್ಟಿಟ್ಯೂಟ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲೇ ಶ್ರೀಗಳು ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. 

"