ಗೃಹ ಸಚಿವ ಪರಮೇಶ್ವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಂಧನವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು (ನ. 12): ಗೃಹ ಸಚಿವ ಪರಮೇಶ್ವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ನಡೆದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಗೃಹಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಲಾಗಿದೆ. ಈ ಹೇಳಿಕೆಯ ವಿರುದ್ಧ ಇಂದು ಬೆಳಗ್ಗೆಯೇ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ನೋಟಿಸ್ ನೀಡದೇ ಬಂಧನ ಯಾವ ನ್ಯಾಯ?

ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ರ ಖಂಡಿಸಿ ರಸ್ತೆ ತಡೆ ನಡೆಸಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂತೋಷ್ ನನ್ನ ಬಿಡುಗಡೆಗೊಳಿಸಲು ಆಗ್ರಹಿಸಿದರು. ನೋಟೀಸ್ ನೀಡದೆ ಏಕಾಏಕಿ ಬಂಧನ ಮಾಡಿರುವ ಪೊಲೀಸರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು. ಸಂತೋಷ್ ಕೊಟ್ಯಾನ್ ಅವರನ್ನು ತಕ್ಷಣವೇ ಹೊರಗಡೆ ಕಳಿಸುವಂತೆ ಪಟ್ಟು ಹಿಡಿದ ಕಾರ್ಯಕರ್ತರು, ಘೋಷಣೆ ಕೂಗುತ್ತಾ, ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಬಿಗಿ ಭದ್ರತೆ:

ಪರಿಸ್ಥಿತಿ ನಿಯಂತ್ರಣಕ್ಕ ತರಲು ಸ್ಥಳಕ್ಕೆ ಎರಡು ಕೆಎಸ್‌ಆರ್‌ಪಿ ತುಕಡಿಗಳು, ಒಂದು ಡಿಆರ್ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಯಕರ್ತರು ಠಾಣೆ ಮುಂಭಾಗದಲ್ಲಿ ಘೋಷಣೆ ಕೂಗಿದರು. ಸಂತೋಷ್ ಕೊಟ್ಯಾನ್ ಅವರ ವಶಕ್ಕೆ ಪಡೆದಿರುವುದು ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವಿನ ಘರ್ಷಣೆಯನ್ನು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

ಸಂತೋಷ್ ಕೋಟ್ಯಾನ್ ಹೇಳಿಕೆ ಏನು?

ನಿನ್ನೆ ಪ್ರತಿಭಟನೆ ವೇಳೆ. ರಾಜ್ಯದಲ್ಲಿ ನಡೆಯುವ ಯಾವುದೇ ಘಟನೆಗಳಿಗೂ ಸರಿಯಾದ ಉತ್ತರ ನೀಡದೇ, ಏನೂ ಗೊತ್ತಿಲ್ಲ, ಕೇಳಿ ಹೇಳ್ತೇನೆ, ಮಾಹಿತಿ ಇಲ್ಲ.. ಎಂಬ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಂತೋಷ್ ಕೊಟ್ಯಾನ್, 'ಏನೂ ಗೊತ್ತಿಲ್ಲ ಎನ್ನುವ ಗೃಹ ಸಚಿವರ ತಮ್ಮ ಮಗ ಬದಲಾಗಿದ್ದು ಸಹ ಗೊತ್ತಾಗಲಿಲ್ಲ' ಎಂದಿದ್ದ ಸಂತೋಷ, ಈ ಹೇಳಿಕೆ ವಿಚಾರವಾಗಿ ದೂರು ದಾಖಲಾಗಿದ್ದರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.