ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಪ್ತ ಸ್ನೇಹಿತನ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು (ಫೆ.28): ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಪ್ತ ಸ್ನೇಹಿತನ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಕ್ಯಾ ಕ್ರಾಸ್ ಬಳಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯೇಂದ್ರ ಸ್ನೇಹಿತನಾಗಿರುವ ಬೀರೂರಿನ ಹರೀಶ್ ಎಂಬುವವರ ಕಾರಿಗೆ ಡಿಕ್ಕಿಯಾಗಿರುವ ಲಾರಿ. ಡಿಕ್ಕಿಯಾದ ರಭಸಕ್ಕೆ ಕಾರಿನ ಹಿಂಭಾಗದ ಬಲಭಾಗ ಜಖಂ ಆಗಿದೆ. ಅದೃಷ್ಟವಶಾತ್ ದುರ್ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವಿಜಯೇಂದ್ರ ಸ್ನೇಹಿತ ಹರೀಶ್. ಲಾರಿಯನ್ನ ವಶಕ್ಕೆ ಪಡೆದ ಪೊಲೀಸರು. ಲಾರಿ ಚಾಲಕನ ಮೇಲೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ; ಬಿವೈ ವಿಜಯೇಂದ್ರ ವಾಗ್ದಾಳಿ, ಡಿಕೆ ಶಿವಕುಮಾರ ಬಗ್ಗೆ ಹೇಳಿದ್ದೇನು?

ಅಪಘಾತ ಹೇಗಾಯ್ತು?

ಇಂದು (ಫೆ. 28 ಶುಕ್ರವಾರ)ರಂದು ಬಸವ ತತ್ವ ಕಾರ್ಯಕ್ರಮ ಹಿನ್ನೆಲೆ ಬಿವೈ ವಿಜಯೇಂದ್ರ ಚಿಕ್ಕಮಗಳೂರಿಗೆ ಆಗಮಿಸಿದ್ದರು. ವಿಜಯೇಂದ್ರರನ್ನ ಭೇಟಿಯಾಗಲು ಬಂದಿದ್ದ ಹರೀಶ್. ಬಳಿಕ ಕಾರ್ಯಕ್ರಮ ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ವಾಪಸ್ಸಾಗುತ್ತಿದ್ದರು. ವಿಜಯೇಂದ್ರರ ಕಾರಿನ ಹಿಂದೆಯೇ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಹರೀಶ್ ಕುಳಿತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಶ್ಯದಿಂದ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ವಿಜಯೇಂದ್ರ ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.