ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ರಾಜ್ಯ ಬಜೆಟ್‌ನಲ್ಲಿ ಅನುದಾನ ಘೋಷಿಸಿದ್ದಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.

ಹನೂರು : ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ರಾಜ್ಯ ಬಜೆಟ್‌ನಲ್ಲಿ ಅನುದಾನ ಘೋಷಿಸಿದ್ದಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹನೂರು ಭಾಗದ ನೀರಾವರಿ ಅಭಿವೃದ್ಧಿಗೆ ₹490 ಕೋಟಿ ಅನುದಾನ

ಶುಕ್ರವಾರ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ರಾಜ್ಯ ಬಜೆಟ್‌ನಲ್ಲಿ ಹನೂರು ಭಾಗದ ನೀರಾವರಿ ಅಭಿವೃದ್ಧಿಗೆ ₹490 ಕೋಟಿ ಅನುದಾನ ಘೋಷಿಸಲಾಗಿದೆ. ಈ ಹಿಂದೆ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳು, ತಮ್ಮೂರಿನ ನೀರಿನ ಸಮಸ್ಯೆಯನ್ನು ವಿವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ‘ನಮ್ಮ ಊರಿನಲ್ಲಿ ನೀರೇ ಇಲ್ಲ. ಸಾವಿರ ಅಡಿ ಕೊಳವೆಬಾವಿ ಕೊರೆದರೂ ನೀರು ಬರುತ್ತಿಲ್ಲ’ ಎಂದು ಪತ್ರದಲ್ಲಿ ಮಕ್ಕಳು ಸಿಎಂ ಗಮನ ಸೆಳೆದಿದ್ದರು.

ಕೆರೆ - ಕಟ್ಟೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಬೇಕೆಂದು ಮನವಿ

ನದಿ ಮೂಲದಿಂದ ಕೆರೆ - ಕಟ್ಟೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಇದೀಗ ರಾಜ್ಯ ಬಜೆಟ್‌ನಲ್ಲಿ ಕಾವೇರಿ ನದಿಯಿಂದ ಕೆರೆ-ಕಟ್ಟೆಗಳನ್ನು ತುಂಬಿಸುವ ‘ಉಡುತೊರೆಹಳ್ಳ ನೀರಾವರಿ ಯೋಜನೆ’ಗೆ ₹490 ಕೋಟಿ ಅನುದಾನ ಘೋಷಿಸಲಾಗಿದೆ. ಇದರಿಂದ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.