ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ದಾವಣಗೆರೆಗೆ ಆಗಮಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾರ್ಯಕ್ರಮದ ನಂತರ ಮಾತನಾಡುವುದಾಗಿ ತಿಳಿಸಿದ್ದಾರೆ. ಪಕ್ಷ ಕಟ್ಟಲು ತಾವು ಮತ್ತು ಅನಂತಕುಮಾರ್ ಪಟ್ಟ ಶ್ರಮವನ್ನು ಸ್ಮರಿಸಿದರು.

- ನಾವಿಬ್ಬರು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೆವು

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

- ನಮ್ಮ ಪರಿಶ್ರಮದಿಂದ ಬಿಜೆಪಿ ಅಧಿಕಾರಿಕ್ಕೆ ಬಂತು

ದಾವಣಗೆರೆ (ಮೇ.9): ಚಿತ್ರದುರ್ಗದಲ್ಲಿ ಮೇ 9ಕ್ಕೆ ಅಭಿಮಾನೋತ್ಸವಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಜನ ಸೇರುವ ನಿರೀಕ್ಷೆಯಿದೆ. ಆ ಕಾರ್ಯಕ್ರಮದ ನಂತರ ನಾನು ಮಾತನಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನೋತ್ಸವದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ನಗರದ ಹೊರವಲಯದ ರೆಸಾರ್ಟ್‌ಗೆ ಶುಕ್ರವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಹಳ ಪ್ರೀತಿ, ವಿಶ್ವಾಸದಿಂದ ಎಲ್ಲರೂ ಸೇರಿ, ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದರು.

ಸೈಕಲ್‌ನಲ್ಲಿ ನಾನು, ಅನಂತಕುಮಾರ್‌ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೆವು. ಇದೆಲ್ಲದರ ಕಾರಣದಿಂದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. 2028ರ ಚುನಾವಣೆಗೆ ಅಭಿನಂದನೋತ್ಸವ ರಣಕಹಳೆಯ ಎಂಬುದನ್ನು ಕಾದು ನೋಡೋಣ ಎಂದು ಅವರು ತಿಳಿಸಿದರು.

ರೆಸಾರ್ಟ್‌ಗೆ ಕಾರ್ಯಕರ್ತರು: ಯಡಿಯೂರಪ್ಪನವರ ಪುತ್ರಿ ಅರುಣಾದೇವಿ ಸೇರಿದಂತೆ ಇಡೀ ಕುಟುಂಬ ಸದಸ್ಯರು ರೆಸಾರ್ಟ್‌ಗೆ ಬಂದಿದ್ದರು. ಯಡಿಯೂರಪ್ಪ ಅವರನ್ನು ನೋಡಲು, ಭೇಟಿಯಾಗಲು ಅನೇಕ ಕಾರ್ಯಕರ್ತರು, ಅಭಿಮಾನಿಗಳು ರೆಸಾರ್ಟ್‌ಗೆ ಆಗಮಿಸಿದ್ದರು.