ಬೀದರ್‌ ಕಂಟ್ರಾಕ್ಟರ್‌ ಆತ್ಮಹತ್ಯೆ ಕೇಸ್‌, ಡೆತ್‌ನೋಟ್‌ನಲ್ಲಿ ಸಚಿವ ಖರ್ಗೆ ಹೆಸರು ಉಲ್ಲೇಖವಾಗಿಲ್ಲ: ಸಚಿವ ಪರಂ

ಬಿಜೆಪಿಯವರು ಪ್ರಕರಣದಲ್ಲಿ ಅನಾವಶ್ಯಕವಾಗಿ ಸಚಿವರ ಹೆಸರನ್ನು ಎಳೆತಂದು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಸಚಿವರ ವಿರುದ್ಧ ಆರೋಪ ಮಾಡಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಪ್ರಯತ್ನ ಇದಾಗಿದೆ. ಪ್ರಕರಣದ ಸತ್ಯಾಸತ್ಯತೆ ಹೊರ ಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ 

CID Investigation on Bidar Contractor Self Death Case Says Home Minister G Parameshwar grg

ಬೆಂಗಳೂರು(ಡಿ.31):  ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಕುರಿತು ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್, ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಪ್ರಕರಣದಲ್ಲಿ ಗ್ರಾಮೀ ಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು. 

ಬಿಜೆಪಿಯವರು ಪ್ರಕರಣದಲ್ಲಿ ಅನಾವಶ್ಯಕವಾಗಿ ಸಚಿವರ ಹೆಸರನ್ನು ಎಳೆತಂದು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಸಚಿವರ ವಿರುದ್ಧ ಆರೋಪ ಮಾಡಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಪ್ರಯತ್ನ ಇದಾಗಿದೆ. ಪ್ರಕರಣದ ಸತ್ಯಾಸತ್ಯತೆ ಹೊರ ಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು. 

ದಲಿತ ಸಮುದಾಯದ ನಾಯಕ ಪ್ರಿಯಾಂಕ್ ಖರ್ಗೆ ಐಟಿಬಿಟಿ ಸಚಿವನಾಗಿದ್ದಕ್ಕೆ ಬಿಜೆಪಿಗೆ ಅಸೂಯೆ: ಡಿಕೆ ಶಿವಕುಮಾರ್

ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಅವರು, ಡೆತ್‌ನೋಟ್‌ನಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ. ತನಿಖೆ ಮುಕ್ತಾಯ ಆಗುವವರೆಗೂ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಾಗೆಯೇಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಲೂ ಆಗಲ್ಲ. ನಮ್ಮ ಸಿಐಡಿ ಸಮರ್ಥವಾಗಿದೆ ಎಂದು ಹೇಳಿದರು.

ಬಿಜೆಪಿ ಹೇಳಿದ್ದನ್ನೆಲ್ಲಾ ನಾವು ಕೇಳಲಾಗದು ಡೆತ್‌ನೋಟ್‌ನಲ್ಲಿ ಎಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖವಾಗಿಲ್ಲ. ತನಿಖೆ ಮುಕ್ತಾಯ ಆಗುವವರೆಗೂ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಹಾಗೆಯೇ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಲೂ ಆಗಲ್ಲ. ನಮ್ಮ ಸಿಐಡಿ ಸಮರ್ಥವಾಗಿದೆ. ಬಿಜೆಪಿಯವರು ಹೇಳಿದ್ದನ್ನೆಲ್ಲ ಕೇಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ಏನಿದು ಪ್ರಕರಣ?

* ಗುತ್ತಿಗೆ ಕೊಡಿಸುವುದಾಗಿ ನಂಬಿಸಿ ಪ್ರಿಯಾಂಕ್ ಖರ್ಗೆ ಆಪ್ತ ಕಪನೂರ ವಂಚಿಸಿದ್ದಾರೆ ಎಂದು ಆರೋಪ 
* ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ 
* ಪ್ರಿಯಾಂಕ್ ಆಪ್ತನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ರಾಜಕೀಯ ಸ್ವರೂಪ ಪಡೆದಿರುವ ಪ್ರಕರಣ ಈಗ ಸಿಐಡಿಗೆ

Latest Videos
Follow Us:
Download App:
  • android
  • ios