ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜಿ.ಹಳ್ಳಿಗೆ ಪೊಲೀಸ್‌ ಆಯುಕ್ತರ ಭೇಟಿ, ಪರಿಶೀಲನೆ| ಗಲಭೆ ಪ್ರಕರಣದ ತನಿಖೆ ಎಲ್ಲ ಆಯಾಮದಲ್ಲೂ ನಡೆದಿದೆ. ಯಾರೇ ತಪ್ಪಿತಸ್ಥರಾಗಿದ್ದರೂ ಮುಲಾಜಿಲ್ಲದೆ ಕ್ರಮ| ಗಲಾಟೆ ಬಳಿಕ ಎರಡು ಠಾಣೆಗಳ ಸರಹದ್ದಿನ ಪರಿಸ್ಥಿತಿ ಅವಲೋಕಿಸಿದ್ದೇನೆ. ವಾತಾವರಣ ಸಹಜ ಸ್ಥಿತಿಗೆ ಮರಳಿದೆ. ಗಲಭೆಯಲ್ಲಿ ಪೊಲೀಸ್‌ ಇಲಾಖೆಗೆ ತುಂಬಾ ನಷ್ಟ| ಹಾನಿ ಬಗ್ಗೆ ವರದಿ ಸಿದ್ಧಪಡಿಸಲಾಗಿದ್ದು, ಸರ್ಕಾರದ ಗಮನಕ್ಕೆ ತರಲಾಗುತ್ತದೆ| 

ಬೆಂಗಳೂರು(ಆ.20): ಕಳೆದ ವಾರ ಗಲಭೆಗೆ ತುತ್ತಾಗಿದ್ದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಪ್ರದೇಶಗಳಿಗೆ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಬುಧವಾರ ಭೇಟಿ ಪರಿಶೀಲನೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಗಲಭೆ ಬಳಿಕ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹಾಗೂ ಗಲಭೆ ಪ್ರಕರಣದ ತನಿಖೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಆಯುಕ್ತರು, ಯಾವುದೇ ಕಾರಣಕ್ಕೂ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಡಿಜೆ ಹಳ್ಳಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ತನಿಖೆ ಬಗ್ಗೆ ಮಾಹಿತಿ ಪಡೆದ ಕಮಿಷನರ್

ಈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತ ಕಮಲ್‌ ಪಂತ್‌ ಅವರು, ಗಲಭೆ ಪ್ರಕರಣದ ತನಿಖೆ ಎಲ್ಲ ಆಯಾಮದಲ್ಲೂ ನಡೆದಿದೆ. ಯಾರೇ ತಪ್ಪಿತಸ್ಥರಾಗಿದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ. ಗಲಾಟೆ ಬಳಿಕ ಎರಡು ಠಾಣೆಗಳ ಸರಹದ್ದಿನ ಪರಿಸ್ಥಿತಿ ಅವಲೋಕಿಸಿದ್ದೇನೆ. ವಾತಾವರಣ ಸಹಜ ಸ್ಥಿತಿಗೆ ಮರಳಿದೆ. ಗಲಭೆಯಲ್ಲಿ ಪೊಲೀಸ್‌ ಇಲಾಖೆಗೆ ತುಂಬಾ ನಷ್ಟವಾಗಿದೆ. ಹಾನಿ ಬಗ್ಗೆ ವರದಿ ಸಿದ್ಧಪಡಿಸಲಾಗಿದ್ದು, ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ಹೆಚ್ಚುವರಿ ಪೊಲೀಸ್‌ ಆಯುಕ್ತ (ಪೂರ್ವ) ಎಸ್‌.ಮುರುಗನ್‌ ಹಾಗೂ ಡಿಸಿಪಿ ಡಾ. ಎಸ್‌.ಡಿ.ಶರಣಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

"