ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಸಿ.ಜೆ. ರಾಯ್ ಅವರೊಂದಿಗೆ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ವ್ಯವಹಾರಿಕ ಸಂಬಂಧ ಹೊಂದಿದ್ದರು. ಈ ಹಿನ್ನೆಲೆ ಇ.ಡಿ ಅಧಿಕಾರಿಗಳು ಹ್ಯಾರಿಸ್ ನಲಪಾಡ್ ಮೇಲೆ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು (ಏ.21): ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಖ್ಯಾತ ಉದ್ಯಮಿ ಸಿ.ಜೆ.ರಾಯ್‌ ಜೊತೆಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ ಮತ್ತು ಅವರ ಪುತ್ರ ಮೊಹಮ್ಮದ್‌ ನಲಪಾಡ್‌ ವ್ಯವಹಾರಿಕ ಸಂಬಂಧ ಹೊಂದಿದ್ದರು. ಈ ಹಿನ್ನೆಲೆಯಲ್ಲಿಯೂ ಇ.ಡಿ. ಅಧಿಕಾರಿಗಳು ಈ ಇಬ್ಬರ ಮೇಲೆ ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

Add Asianetnews Kannada as a Preferred SourcegooglePreferred

ರಾಯ್‌ ಅವರು ಕರ್ನಾಟಕ, ಕೇರಳ, ದುಬೈ ಸೇರಿ ಹಲವು ಕಡೆ ರಿಯಲ್‌ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದರು. ಹಣಕಾಸು ವ್ಯವಹಾರ ಸಂಬಂಧ ಕೇರಳ ಐಟಿ ಅಧಿಕಾರಿಗಳು ರಾಯ್‌ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆಯೇ ರಾಯ್‌ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಿ.ಜೆ.ರಾಯ್‌ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವ್ಯವಹಾರಿಕ ನಷ್ಟ, ತೆರಿಗೆ ವಂಚನೆ ಸೇರಿ ಹಲವು ವಿಷಯಗಳು ಚರ್ಚೆಗೆ ಬಂದಿದ್ದವು. ಈ ರಾಯ್‌ ಜೊತೆಗೆ ಹ್ಯಾರಿಸ್‌ ನಲಪಾಡ್‌ ಕುಟುಂಬ ವ್ಯವಹಾರಿಕ ಸಂಬಂಧ ಇರಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.