ಬೆಂಗಳೂರು [ನ.08]:  ಸರ್ಕಾರಿ ನೌಕರರ ವರ್ಗಾವಣೆಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಗತ್ಯವಿದ್ದಲ್ಲಿ ಮಾತ್ರ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ನಡೆಸುವಂತೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  ಸುತ್ತೋಲೆ ಹೊರಡಿಸಿದೆ.

ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ನಂತರ ಮಾಡುವ ನೌಕರರು ಅಥವಾ ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ ಗಳ ಪೂರ್ವಾನುಮತಿ ಅಗತ್ಯ ಎಂದು ಹಿಂದೆ 2013 ರಲ್ಲಿಯೇ ಈ ಸಂಬಂಧ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿತ್ತು. 

ಸಿಎಂ ಒಪ್ಪಿದರೆ ಮಾತ್ರ ಸರ್ಕಾರಿ ನೌಕರರ ವರ್ಗ

ಈ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 10 ರಂದು ಮುಗಿದ ನಂತರ ಅಕ್ಟೋಬರ್ 10 ರವರೆಗೆ ಆಯಾ ಸಚಿವರೇ ವರ್ಗಾವಣೆ ವಿಷಯದಲ್ಲಿ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಲಾಗಿತ್ತು.

ಇದೀಗ ಆ ಅಧಿಕಾರವನ್ನು ಮೊಟಕುಗೊಳಿಸಿ ವರ್ಗಾವಣೆ ಅನಿವಾರ್ಯ ಇದ್ದಲ್ಲಿ ಮಾತ್ರ ಮುಖ್ಯಮಂತ್ರಿಗಳ ಅನುಮೋದನೆ ಪಡೆಯಬೇಕು ಎಂದು ಸೂಚಿಸಲಾಗಿದೆ.