ದೇವರಿಗೆ ಬಿಡುಗಡೆ: ರಾಜ್ಯದಲ್ಲಿ ದೇವಸ್ಥಾನ, ಚರ್ಚ್, ಮಸೀದಿ ತೆರೆಯಲು ಸಿಎಂ ಆದೇಶ!
ಜೂನ್‌ನಿಂದ ಎಲ್ಲದಕ್ಕೂ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಬಹುದು| ಮಾಲ್ ಓಪನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗೆ ಪ್ರತ್ರ ಬರೆದಿದ್ದೇನೆ| ಎಲ್ಲದಕ್ಕೂ ಕೇಂದ್ರ ಸರ್ಕಾರದ ಅನುಮತಿ ಬೇಕು, ಅದಕ್ಕೆ ಕಾಯುತ್ತಿದ್ದೇವೆ| ಮಾಲ್ ಓಪನ್ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರದ ತೀರ್ಮಾನ ತೆಗೆದುಕೊಳ್ಳುತ್ತದೆ|
ಬೆಂಗಳೂರು(ಮೇ.27): ಮೇ.31 ರ ಬಳಿಕ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನ ಓಪನ್ ಮಾಡುತ್ತೇವೆ. ದೇವಸ್ಥಾನ, ಚರ್ಚ್ ಮಸೀದಿ ಎಲ್ಲವೂ ಒಂದೇ, ದೇಶದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಹೀಗಾಗಿ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನ ತೆರೆಯುತ್ತಿದ್ದೇವೆ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
"
ಇಂದು(ಬುಧವಾರ) ವಿಧಾನಸೌಧದಲ್ಲಿ ಕೋವಿಡ್ ಪರೀಕ್ಷೆಗೆ ಸಂಚಾರಿ ಸ್ಮಾರ್ಟ್ ಕಿಯೋಸ್ಕ್‌ಗಳನ್ನ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ವಿಪ್ರೋ ಸಂಸ್ಥೆಯ ಸಹಯೋಗದೊಂದಿಗೆ ಈ ಸ್ಮಾರ್ಟ್ ಕಿಯೋಸ್ಕ್‌ಗಳು ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದ್ದಾರೆ.
ಭಕ್ತರಿಗೆ ದರ್ಶನ, ದೇವಾಲಯ ತೆರೆಯಲು ಗ್ರೀನ್ ಸಿಗ್ನಲ್?
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವಸ್ಥಾನಗಳು ಓಪನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವೀರೇಂದ್ರ ಹೆಗಡೆ ಅವರು ಕೆಲವೊಂದಿಷ್ಟು ಸಲಹೆಗಳನ್ನ ಕೊಟ್ಟಿದ್ದಾರೆ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ರಾತ್ರಿ ಯಾರು ರೂಮ್‌ಗಳಲ್ಲಿ ಉಳಿದುಕೊಳ್ಳುವಂತಿಲ್ಲ ಅಂತ ವೀರೇಂದ್ರ ಹೆಗ್ಗಡೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಎಲ್ಲ ಸಲಹೆಗಳನ್ನ ಪರಿಗಣನೆಗೆ ತೆಗದುಕೊಂಡು ದೇವಸ್ಥಾನಗಳ ಓಪನ್ ಮಾಡುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ. ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈಗ ಕೋವಿಡ್ ಹಿನ್ನಲೆಯಲ್ಲಿ ಘೋಷಣೆ ಮಾಡಿದ ಪರಿಹಾರ ಜನರಿಗೆ ತಲುಪುತ್ತಿದೆ ಯಾವುದೇ ತೊಂದರೆ ಆಗಿಲ್ಲ. ದೇವರು ಮೆಚ್ಚುವ ಕೆಲಸ ಮಾಡಿದ್ದೇವೆ. ಹಂತ ಹಂತವಾಗಿ ಪರಿಹಾರ ಬಿಡುಗಡೆ ಮಾಡುತ್ತಿದ್ದೇವೆ. ಹಣಕಾಸು ಬಿಡುಗಡೆ ಮಾಡಿ ಕೆಲಸ ಪ್ರಾರಂಭ ಮಾಡಿದ್ದೇವೆ. ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಮುದಾಯಗಳಿಗೆ ಪರಿಹಾರ ಘೋಷಿಸಿದೆ. ಈಗಾಗಲೇ ಘೋಷಿಸಿದ ಪರಿಹಾರಗಳನ್ನು ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಬಹುತೇಕ ಜೂನ್‌ನಿಂದ ಎಲ್ಲದಕ್ಕೂ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಬಹುದು. ಮಾಲ್ ಓಪನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರತ್ರ ಬರೆದಿದ್ದೇನೆ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಅನುಮತಿ ಬೇಕಾಗಿದೆ, ಅದಕ್ಕೆ ಕಾಯುತ್ತಿದ್ದೇವೆ. ಮಾಲ್ ಓಪನ್ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.