ದೇಶದ ಬೇರೆ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನಲ್ಲಿ 10 ಪಟ್ಟು ಹೆಚ್ಚು ಉತ್ತಮ ಕೆಲಸಗಳಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.  

ಬೆಂಗಳೂರು (ಮಾ.24): ದೇಶದ ಬೇರೆ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನಲ್ಲಿ 10 ಪಟ್ಟು ಹೆಚ್ಚು ಉತ್ತಮ ಕೆಲಸಗಳಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಬಿಎಂಪಿಯಿಂದ ಪಂತರಪಾಳ್ಯದಲ್ಲಿ ನಿರ್ಮಿಸಲಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಡಾ. ಪುನೀತ್‌ ರಾಜ್‌ಕುಮಾರ್‌ ಹೆಸರು ನಾಮಕರಣ ಮಾಡಿ ಚಾಲನೆ ನೀಡಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಬ್ರ್ಯಾಂಡ್‌ ಬೆಂಗಳೂರಿಗೆ ಗೌರವ, ಪ್ರತಿಷ್ಠೆ ಇದೆ. ಅನ್ನು ಉಳಿಸಿ, ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ. ಆದರೆ, ಕೆಲವರು ಬೆಂಗಳೂರು ಬ್ರ್ಯಾಂಡ್‌ಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಾರೆ. 

ಆದರೆ, ಅದು ಸಾಧ್ಯವಿಲ್ಲ ಎಂದರು. ನಗರದಲ್ಲಿ ಅಭಿವೃದ್ಧಿ ಸುಲಭವಲ್ಲ. ಹಲವಾರು ಸಮಸ್ಯೆಗಳ ನಡುವೆ ಅಭಿವೃದ್ಧಿ ಕೆಲಸ ಮಾಡಬೇಕಾಗಿದೆ. ಬೆಂಗಳೂರು ನಗರ ಅಭಿವೃದ್ಧಿ 8 ಸಾವಿರ ಕೋಟಿ ರು. ಅಧಿಕ ಅನುದಾನ ನೀಡಲಾಗಿದೆ. ನಗರದಲ್ಲಿ ಅಭಿವೃದ್ಧಿ ಸುಲಭವಲ್ಲ. ಹಲವಾರು ಸಮಸ್ಯೆಗಳ ನಡುವೆ ಅಭಿವೃದ್ಧಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ವಿಶ್ವದ ಅತ್ಯಂತ ದೊಡ್ಡ ಕಂಪನಿಗಳ ಪೈಕಿ 400ಕ್ಕೂ ಅಧಿಕ ಕಂಪನಿಗಳು ಬೆಂಗಳೂರಿನಲ್ಲಿವೆ. ಪ್ರತಿ ದಿನ ಐದು ಸಾವಿರಕ್ಕೂ ಅಧಿಕ ವಿಜ್ಞಾನಿಗಳು, ಸಂಶೋಧಕರು ಬೆಂಗಳೂರಿಗೆ ಬಂದು ಹೋಗುತ್ತಾರೆ. ಬೇರೆ ನಗರಗಳಿಗೆ ಹೋಲಿಕೆ ಮಾಡಿದರೆ, ಬೆಂಗಳೂರು ಅತ್ಯಂತ ಸುರಕ್ಷಿತವಾಗಿವಾಗಿದೆ. 

ಮೈಸೂರಲ್ಲಿ ಚಿತ್ರನಗರಿ ನಿರ್ಮಾಣ ಸದ್ಯದಲ್ಲೇ ಆರಂಭ: ಸಿಎಂ ಬೊಮ್ಮಾಯಿ

ಹಾಗಾಗಿ, ಹೆಣ್ಣು ಮಕ್ಕಳು ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವುದಕ್ಕೆ ಅನುಮತಿ ನೀಡಲಾಗಿದೆ. ಬೇರೆ ಯಾವುದೇ ನಗರದಲ್ಲಿ ಈ ಸುರಕ್ಷತೆ ಮಹಿಳೆ ಯರಿಗೆ ಇಲ್ಲ ಎಂದರು. ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಮಾತನಾಡಿ, ಕರ್ನಾಟಕ ರತ್ನ ಪುನೀತ್‌ ರಾಜ್‌ ಕುಮಾರ್‌ ಅವರ ಸ್ಮರಣೆಯಲ್ಲಿ ಪಂತರಪಾಳ್ಯ ಸುತ್ತಮುತ್ತಲ ನಿವಾಸಿಗಳಿಗೆ ಸುಸಜ್ಜಿತವಾದ 210 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಈ ಪೈಕಿ ನವಜಾತ ಮಕ್ಕಳಿಗೆ ಚಿಕಿತ್ಸೆ ನೀಡುವುದಕ್ಕೆ 40 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಗೋವಿಂದರಾಜನಗರ ಕ್ಷೇತ್ರದ 23 ಸರ್ಕಾರಿ ಶಾಲೆಗಳ ಪೈಕಿ 22 ಶಾಲೆಗಳನ್ನು ಆಧುನೀಕರಣ ಮಾಡಲಾಗಿದೆ. 

ಅಂಗನವಾಡಿ, ಪೊಲೀಸ್‌ ಠಾಣೆ ನಿರ್ಮಾಣ, 108 ಶುದ್ಧ ಕುಡಿಯುವ ನೀರಿನ ಘಟಕ ಹಾಗೂ 60ಕ್ಕೂ ಉದ್ಯಾನವನಗಳ ನವೀಕರಿಸಲಾಗಿದೆ ಎಂದು ಹೇಳಿದರು. ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ನಾಯಂಡಹಳ್ಳಿ ಕೆರೆ ತುಂಬಿಸುವ ಕೆಲಸ ಮಾಡಲಾಗಿದೆ. ಇದೀಗ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದರು. ಸಮಾರಂಭದಲ್ಲಿ ನವೀಕರಿಸಿದ ನಾಯಂಡಹಳ್ಳಿ ಕೆರೆ ಲೋಕಾರ್ಪಣೆ ಮಾಡಲಾಯಿತು. ನಟ ರಾಘವೇಂದ್ರ ರಾಜ್‌ಕುಮಾರ್‌ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್‌, ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ವಲಯ ಆಯುಕ್ತ ಡಾ.ಆರ್‌.ಎಲ್‌.ದೀಪಕ್‌, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌.ಆರ್‌.ರಮೇಶ್‌, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡ, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉಪಸ್ಥಿತರಿದ್ದರು.

ಎಸ್‌ಸಿ, ಎಸ್‌ಟಿ ಮೀಸಲು ಹೆಚ್ಚಳ ಶೆಡ್ಯೂಲ್‌ 9ಕ್ಕೆ ಸೇರಿಸಿ: ಕೇಂದ್ರಕ್ಕೆ ರಾಜ್ಯದಿಂದ ಪತ್ರ

ನಗರದ 1 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರವು ಈವರೆಗೆ ಕೊಳಗೇರಿಯ 3 ಲಕ್ಷ ಜನರಿಗೆ ಹಕ್ಕುಪತ್ರ ನೀಡಿದೆ. 85 ಸಾವಿರ ಸ್ಲಂ ನಿವಾಸಿಗಳಿಗೆ ಮನೆ ಕಟ್ಟಿಕೊಟ್ಟಿದ್ದೇವೆ. ಬೆಂಗಳೂರಿನಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ ಮಾಡಿದ್ದೇವೆ. 22 ಸಾವಿರ ಮನೆಕಟ್ಟಿದ್ದೇವೆ. ಇನ್ನೂ 22 ಸಾವಿರ ಕೊನೆಯ ಹಂತದ ನಿರ್ಮಾಣ ಕಾರ್ಯ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗದಲ್ಲಿ ಒಟ್ಟು 5 ಲಕ್ಷ ಮನೆ ಕಟ್ಟಿದ್ದೇವೆ. ಇನ್ನೂ ಐದು ಲಕ್ಷ ಮನೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.