ನೂರನೇ ಜನೌಷಧಿ ಕೇಂದ್ರಕ್ಕೆ ಸಿಎಂ ಚಾಲನೆ: ಕೇಂದ್ರ ಸಚಿವ ಮನ್ಸುಖ್‌ ಮಾಂಡವಿಯಾ ಭಾಗಿ

ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ. ಇನ್ನೊಂದು ವಾರದಲ್ಲಿ ಬಾಕಿ 100 ನಮ್ಮ ಕ್ಲಿನಿಕ್‌ ಕಾರ್ಯಾರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

CM Basavaraj Bommai Inaugurates Jan Aushadhi Kendra in Bengaluru South gvd

ಬೆಂಗಳೂರು (ಮಾ.08): ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ. ಇನ್ನೊಂದು ವಾರದಲ್ಲಿ ಬಾಕಿ 100 ನಮ್ಮ ಕ್ಲಿನಿಕ್‌ ಕಾರ್ಯಾರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್‌-2023 ಆಚರಣೆ ಮತ್ತು 100ನೇ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ನಗರದ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್‌ ಪ್ರಾರಂಭಿಸಲಾಗುತ್ತಿದ್ದು, ಈಗಾಗಲೇ 108 ಕಾರ್ಯಾರಂಭಗೊಂಡಿವೆ. ಇನ್ನೂ ನೂರು ಕ್ಲಿನಿಕ್‌ ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 19 ಪಿಎಚ್‌ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಎಲ್ಲೆಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ಸನ್ನು ಜನ ಗ್ಯಾರಂಟಿ ಮನೆಗೆ ಕಳಿಸ್ತಾರೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕ್ರಿಯಾಶೀಲ ಕೇಂದ್ರ ಸಚಿವ ಮನ್ಸುಖ್‌ ಮಾಂಡವಿಯಾ ರಾಜ್ಯಕ್ಕೆ ಹೆಚ್ಚುವರಿ ಲಸಿಕೆ ಒದಗಿಸಿದ್ದಲ್ಲದೇ, ಯೂರಿಯಾ ಕೊರತೆ ಆಗದಂತೆ ಕ್ರಮಕೈಗೊಂಡಿದ್ದಾರೆ. ಇನ್ನು ಸಂಸದ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಲ್ಲಿ 100 ಜನೌಷಧಿ ಕೇಂದ್ರ ಆರಂಭಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಕೆಎಸ್‌ಆರ್‌ಟಿಸಿ ಆಸ್ಪತ್ರೆಯಲ್ಲಿ ವಾಸವಿ ಚಾರಿಟಬಲ್‌ ಆಸ್ಪತ್ರೆಯು ಉಚಿತ ಡಯಾಲಿಸ್‌ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಮುಖ್ಯಮಂತ್ರಿಗಳು ಶ್ಲಾಘನೆ ವ್ಯಕ್ತಪಡಿಸಿದರು.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯಾ ಮಾತನಾಡಿ, ಜನೌಷಧಿ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೇ ಖಾಸಗಿ ಮೆಡಿಕಲ್‌ನಲ್ಲೂ ತೆರೆಯಲು ಮುಕ್ತವಾದ ಅವಕಾಶವನ್ನು ನೀಡಲಾಗಿದೆ. ಮೊದಲು ಅರ್ಜಿ ಸಲ್ಲಿಸಿ ನಂತರ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗುವುದು. ಸರ್ಕಾರದಿಂದ ಜನೌಷಧಿ ಕೇಂದ್ರ ಆರಂಭಿಸುವವರಿಗೆ ರಿಯಾಯಿತಿಯನ್ನೂ ಸಹ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೆ 9 ಸಾವಿರ ಜನೌಷಧಿ ಕೇಂದ್ರ ತೆರೆ ಯಲಾಗಿದೆ. ಜನರಿಗೆ ಕಡಿಮೆ ದರದಲ್ಲಿ ಔಷಧಿ ದೊರೆಯುವಂತೆ ಮಾಡಲಾಗಿದೆ. ಅದನ್ನು ಇನಷ್ಟುಜನರಿಗೆ ತಿಳಿಸುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಜನೌಷಧಿ ಕೇಂದ್ರಗಳು ಬಗ್ಗೆ ಹಾಗೂ ಅಲ್ಲಿ ಕಡಿಮೆ ದರದಲ್ಲಿ ದೊರೆಯುವ ಔಷಧಿಗಳ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು. ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಪ್ರಗತಿ ಕಡೆ ಸಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತವನ್ನು ರಾಜ್ಯದ ಜನ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌, ಬಸವನಗುಡಿ ಶಾಸಕರು ರವಿ ಸುಬ್ರಹ್ಮಣ್ಯ, ವಾಸವಿ ಆಸ್ಪತ್ರೆಯ ಅಧ್ಯಕ್ಷರು ಎಸ್‌. ವಿ.ಸುಬ್ರಹ್ಮಣ್ಯಂ ಸೇರಿದಂತೆ ಮೊದಲಾದವರಿದ್ದರು.

ಯಾವತ್ತಾದ್ರೂ 2 ಗಂಟೆ ಬಂದ್‌ ಬಗ್ಗೆ ಕೇಳಿದ್ದೀರಾ?: ಸಿಎಂ ಬೊಮ್ಮಾಯಿ

ಆಡಳಿತಗಾರರಿಗೆ ಸೂಕ್ಷ್ಮಾತಿಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು. ಬಡತನ ಕಷ್ಟಅರ್ಥ ಮಾಡಿಕೊಂಡು ಪ್ರಧಾನಿ ಬಡವರಿಗಾಗಿ ಸುಲಭ ಮತ್ತು ಕಡಿಮೆ ದರದಲ್ಲಿ ಔಷಧಿ ದೊರೆಯಬೇಕು. ಆರೋಗ್ಯವಂತ ಮತ್ತು ಸಶಕ್ತ ಭಾರತ ನಿರ್ಮಾಣ ಮಾಡುವ ಉದ್ದೇಶದಿಂದ ಜನೌಷಧಿ ಕೇಂದ್ರ ಆರಂಭಿಸುವ ಕಾರ್ಯಕ್ರಮ ರೂಪಿಸಿದರು.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

Latest Videos
Follow Us:
Download App:
  • android
  • ios