Asianet Suvarna News Asianet Suvarna News

Omicron: ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ​, ದೆಹಲಿಯಿಂದ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬೊಮ್ಮಾಯಿ

* ಕರ್ನಾಟಕದಲ್ಲಿ ಒಮಿಕ್ರಾನ್​ ಆತಂಕ 
* ಕೊರೋನಾ ಹೊಸ ರೂಪಾಂತರಿ ವೈರಸ್ 'ಒಮಿಕ್ರಾನ್' ಇಬ್ಬರಲ್ಲಿ ಪತ್ತೆ
* ಅಗತ್ಯ ಬಿದ್ರೆ ಮಾರ್ಗಸೂಚಿ ಬದಲಾಯಿಸ್ತೇವೆ ಎಂದ ಸಿಎಂ

CM Basavaraj Bommai React On omicron cases detected in Karnataka rbj
Author
Bengaluru, First Published Dec 2, 2021, 8:23 PM IST

ನವದೆಹಲಿ, (ಡಿ.02): ತೀವ್ರ ಆತಂಕಕ್ಕೆ ಕಾರಣವಾಗಿದ್ದ ಕೊರೋನಾ ಹೊಸ ರೂಪಾಂತರಿ ವೈರಸ್ 'ಒಮಿಕ್ರಾನ್' (Omicron) ರಾಜ್ಯದಲ್ಲಿ ಇಬ್ಬರಲ್ಲಿ ಪತ್ತೆಯಾಗಿದೆ ಎಂಬ ಆಘಾತಕಾರಿ ವಿಷಯವನ್ನು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ನವದೆಹಲಿಯಲ್ಲಿ (New Delhi) ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ (Union Health Department) ಕಾರ್ಯದರ್ಶಿ ಈ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Omicron Cases In Karnataka: ಕರುನಾಡಿನ ಮೂಲಕ ಭಾರತಕ್ಕೆ ಕಾಲಿಟ್ಟ ಒಮಿಕ್ರಾನ್, ಇಬ್ಬರಲ್ಲಿ ಪತ್ತೆ!

ಇನ್ನು ಈ ಬಗ್ಗೆ ನವದೆಹಲಿಯಲ್ಲಿ ಇಂದು (ಡಿ.02) ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ರಾಜ್ಯದಲ್ಲಿ ಪತ್ತೆಯಾಗಿರುವ ಒಮಿಕ್ರಾನ್​ ಅಷ್ಟೇನೂ ಅಪಾಯಕಾರಿ ಇಲ್ಲ. ಒಮಿಕ್ರಾನ್​ ತಡೆ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇನೆ. ತಜ್ಞರು ಆತಂಕ ಪಡುವಂತಿಲ್ಲ ಎಂದಿದ್ದಾರೆ. ಹೀಗಾಗಿ ಅಗತ್ಯ ಬಿದ್ರೆ ಮಾರ್ಗಸೂಚಿ ಬದಲಾಯಿಸುತ್ತೇವೆ ಎಂದು ತಿಳಿಸಿದರು.

ಇನ್ನು ಒಮಿಕ್ರಾನ್​ ಚಿಕಿತ್ಸೆಗೆ ಸಕಲ ರೀತಿಯಲ್ಲಿ ಸನ್ನದ್ಧರಾಗಿದ್ದೇವೆ. ಒಮಿಕ್ರಾನ್​ ಅಷ್ಟೇನೂ ಅಪಾಯವಿಲ್ಲ. ಜನರು ಕೋವಿಡ್​ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸಿಎಂ ಮನವಿ ಮಾಡಿದರು.

Omicron: ಒಮಿಕ್ರಾನ್‌ ಆತಂಕ, ಸಿನಿಮಾ, ಹೋಟೆಲ್, ಮಾಲ್ ಬಂದ್ ಬಗ್ಗೆ ಸ್ಪಷ್ಟನೆ ಕೊಟ್ಟ ಅಶ್ವತ್ಥನಾರಾಯಣ

ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದೇನು?
ಆರೋಗ್ಯ ಸಚಿವಾಲಯ ಸ್ಥಾಪಿಸಿದ 37 ಪ್ರಯೋಗಾಲಯಗಳ INSACOG ಒಕ್ಕೂಟದ ಜೀನೋಮ್ ಅನುಕ್ರಮ (Genome sequencing effort of INSACOG consortium) ಪ್ರಯತ್ನದ ಮೂಲಕ" ಲಭ್ಯವಾದ ವರದಿಯನ್ವಯ ವಿದೇಶದಿಂದ ಆಗಮಿಸಿದ ಕರ್ನಾಟಕದ ಇಬ್ಬರು ಪುರುಷರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಇದು ಭಾರತದಲ್ಲಿ ದೃಢಪಟ್ಟ ಮೊದಲ ಎರಡು ಪ್ರಕರಣಗಳು" ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

45 ವರ್ಷದ ಓರ್ವ ಹಾಗೂ 66 ವರ್ಷದ ಓರ್ವ ವೃದ್ಧನಿಗೆ ಈ ಸೋಂಕು ಕಾಣಿಸಿಕೊಂಡಿದೆ. ಎರಡೂ ಓಮಿಕ್ರಾನ್ ಪ್ರಕರಣಗಳ ಪ್ರಾಥಮಿಕ, ದ್ವಿತೀಯಕ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಪರೀಕ್ಷಿಸಲಾಗುತ್ತಿದೆ ಎಂದೂ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಜನರು ಭಯಭೀತರಾಗದಂತೆ ಮನವಿ ಮಾಡಿಕೊಂಡಿರುವ ಕೇಂದ್ರ, ಕೊರೋನಾ ತಡೆಗಟ್ಟಲು ಅನುಸರಿಸಬೇಕಾದ ಅಗತ್ಯ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದೆ. 

ಅಶ್ವತ್ಥನಾರಾಯಣ ಅಭಿಪ್ರಾಯ
 ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ(Dr CN Ashwath Narayan) ಪ್ರತಿಕ್ರಿಯಿಸಿದ್ದು,ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಒಮಿಕ್ರಾನ್‌(Omicron) ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಒಮಿಕ್ರಾನ್‌ ವೈರಾಣುವಿನಿಂದ ಜೀವಕ್ಕೇನೂ ಅಪಾಯವಿಲ್ಲ. ಆದರೆ ಮುಂಜಾಗ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಇದುವರೆಗೂ ಒಂದೂ ಲಸಿಕೆಯನ್ನು ಪಡೆದುಕೊಳ್ಳದೆ ಇರುವವರು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಸರಕಾರ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ, ಅನಗತ್ಯ ಭಯ-ಭೀತಿಗಳು ಬೇಡ ಎಂದು ಅವರು ಹೇಳಿದರು. 

ಚಿತ್ರಮಂದಿರ, ಹೋಟೆಲ್, ಮಾಲ್ ಗಳಂತಹ ಜನಸಂದಣಿ ಸ್ಥಳಗಳು ಸೇರಿದಂತೆ ಎಲ್ಲೆಡೆಗಳಿಗೂ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಹೋಗಬೇಕು. ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ 11 ದೇಶಗಳ ಪರಿಸ್ಥಿತಿ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು. ಸದ್ಯಕ್ಕೆ ರಾಜ್ಯದಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಇವರ ಪರೀಕ್ಷಾ ವರದಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳನ್ನು ಪ್ರತ್ಯೇಕ ವಾಸದಲ್ಲಿಡಲಾಗಿದೆ. ಅಂತಿಮ ಫಲಿತಾಂಶ ನೆಗೆಟೀವ್ ಆಗಿ ಬಂದರೆ ಮಾತ್ರ ಇವರನ್ನು ಮನೆಗೆ ಕಳಿಸಿ ಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. 

ಒಮೈಕ್ರಾನ್ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಿರುವ ವಿಧಾನಮಂಡಲದ ಅಧಿವೇಶನವನ್ನು ಕೂಡ ರದ್ದುಪಡಿಸಬೇಕೆಂದು ವಿಧಾನಸೌಧ ಸಚಿವಾಲಯ ಸಲಹೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭಾಪತಿಯೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು
 

Follow Us:
Download App:
  • android
  • ios