Asianet Suvarna News Asianet Suvarna News

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಸಾಧ್ಯವಿಲ್ಲ, ಕೇರಳದ ಎಲ್ಲಾ ಮನವಿ ತಿರಸ್ಕರಿಸಿದ ಬೊಮ್ಮಾಯಿ!

ಕೇರಳ ಸಿಎಂ ಪಿಣರಾಜಿ ವಿಜಯ್ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಆದರೆ ಹಲವು ಮನವಿಗಳನ್ನು ಹೊತ್ತು ಕರ್ನಾಟಕಕ್ಕೆ ಆಗಮಿಸಿದ ಪಿಣರಾಯಿ ವಿಜಯನ್‌ಗೆ ನಿರಾಸೆಯಾಗಿದೆ. ಎಲ್ಲಾ ಮನವಿಗಳನ್ನು ಬೊಮ್ಮಾಯಿ ತರಿಸ್ಕರಿಸಿದ್ದಾರೆ.
 

CM Basavaraj bommai rejects Kerala CM Pinarayi Vijayan all rail and road connectivity infrastructure proposals ckm
Author
First Published Sep 18, 2022, 7:11 PM IST

ಬೆಂಗಳೂರು(ಸೆ.18): ಹಲವು ಮಹತ್ವಾಂಕ್ಷೆ ಇಟ್ಟು ಕರ್ನಾಟಕಕ್ಕೆ ಆಗಮಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದೀಗ ಬರೀಗೈಯಲ್ಲಿ ವಾಪಾಸ್ಸಾಗಿದ್ದಾರೆ. ಕೇರಳ ಸರ್ಕಾರದ ಎಲ್ಲಾ ಮನವಿಗಳನ್ನು ಕರ್ನಾಟಕ ತಿರಸ್ಕರಿಸಿದೆ. ರಾಜ್ಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ, ವನ್ಯಜೀವಿ ಧಾಮಗಳಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದ ಮೂಲಕ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದರು.  ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಗಮಿಸಿದ್ದರು. ಈ ವೇಳೆ ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.  ಕೇರಳದ ಪ್ರಮುಖ ಯೋಜನೆಗಳು ಕರ್ನಾಟಕದ ಮೂಲಕ ಹಾದು ಹೋಗುತ್ತಿರುವ ಕಾರಣ ಬೊಮ್ಮಾಯಿ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ. ಆದರೆ ಪಿಣರಾಯಿ ವಿಜಯನ್ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ. 

ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ(rail infrastructure Projects) ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ(Kerala Government) ಕೋರಿತು. ಪ್ರಸ್ತಾಪಿತ ಕನ್ಯೂರು – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದ್ದು, ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲಗಳಿಲ್ಲ. ಅಲ್ಲದೆ ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಸಹಮತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಬೊಮ್ಮಾಯಿ(CM Basavaraj Bommai)ತಿಳಿಸಿದರು.

ದಸರಾ ಜಂಬೂ ಸವಾರಿಗೆ ಪ್ರಧಾನಿ ಮೋದಿ ಭೇಟಿ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಇದರೊಂದಿಗೆ ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ(Kerala CM Pinarayi Vijayan) ಪ್ರಸ್ತಾಪಿಸಿದರು. ಆದರೆ ಈ ಯೋಜನೆಯ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದು ಹೋಗುವುದರಿಂದ ಅಲ್ಲಿನ ವನ್ಯ ಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತದೆ. ಆದ್ದರಿಂದ ಇದಕ್ಕೆ ಸಮ್ಮತಿಸಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು. ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರವು ಪ್ರಸ್ತಾಪಿಸಿತು. ಆದರೆ ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರ ಹಾನಿಯಾಗುವುದು.ಆದ್ದರಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು(Karnataka) ಸ್ಪಷ್ಟಪಡಿಸಲಾಯಿತು. 

ಇದೀಗ ಕೇರಳಕ್ಕೆ ಬಂಡಿಪುರ ರಾಷ್ಟ್ರೀಯ ಉದ್ಯಾನದ ಮೂಲಕ ರಾತ್ರಿವೇಳೆ ಎರಡು ಬಸ್ಗಳು ಸಂಚರಿಸುತ್ತಿದ್ದು, 4 ಬಸ್ಗಳಿಗೆ ಅನುಮತಿ ನೀಡುವಂತೆ ಕೋರಿದರು. ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

Kalyana Karnataka Utsav: 300 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ - ಸಿಎಂ
 

Follow Us:
Download App:
  • android
  • ios