Asianet Suvarna News Asianet Suvarna News

Shivamogga: ವಿಮಾನ ನಿಲ್ದಾಣಕ್ಕೆ ಬಿಎಸ್‌ವೈ ಹೆಸರು, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರ ಹೆಸರನ್ನೇ ಇಡಬೇಕು ಎಂದು ಸಚಿವ ಸಂಪುಟದಲ್ಲಿ ಒಪ್ಪಿಕೊಂಡಿದ್ದೇವೆ. ಅವರ ಹೆಸರನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

cm basavaraj bommai Submission of proposal to the Central bs yediyurappa name for shivamogga airport gvd
Author
First Published Feb 8, 2023, 10:11 PM IST

ಶಿವಮೊಗ್ಗ (ಫೆ.08): ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರ ಹೆಸರನ್ನೇ ಇಡಬೇಕು ಎಂದು ಸಚಿವ ಸಂಪುಟದಲ್ಲಿ ಒಪ್ಪಿಕೊಂಡಿದ್ದೇವೆ. ಅವರ ಹೆಸರನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಎನ್‌ಇಎಸ್‌ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಶ್ರಮದ ಫಲವಾಗಿ ಶಿವಮೊಗ್ಗದಲ್ಲಿ ವಿಮಾಣ ನಿಲ್ದಾಣ ನಿರ್ಮಾಣವಾಗಿದೆ. ಇದು ಕೇವಲ 18 ತಿಂಗಳಲ್ಲಿ ನಿರ್ಮಾಣಗೊಂಡಿರುವುದು ದಾಖಲೆ. 

ಯಡಿಯೂರಪ್ಪ ಅವರು ಛಲದಿಂದ ಈ ವಿಮಾನ ನಿಲ್ದಾಣ ನಿರ್ಮಿಸಿದ್ದಾರೆ. ಹೀಗಾಗಿ ಈ ನಿಲ್ದಾಣಕ್ಕೆ ಅವರ ಹೆಸರನ್ನೇ ಇಡಬೇಕು ಎಂದು ಸಚಿವ ಸಂಪುಟದಲ್ಲಿ ತಿರ್ಮಾನಿಸಲಾಗಿದೆ ಎಂದರು. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ ಎಂದು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ. ಒಬ್ಬ ನಾಯಕ ಸಾಕಷ್ಟುಶ್ರಮ ಹಾಕಿ ಕೆಲಸ ಮಾಡಿರುತ್ತಾರೆ. ಆದರೆ, ಸಹಜವಾಗಿ ಅವರ ಹೆಸರು ಇಡಬೇಕು ಎಂದಾಗ ಮುಜುಗರ ಇರುತ್ತದೆ. ಆದರೆ, ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ನಾಯಕರು ಮನ್ನಣೆ ಕೊಡಬೇಕಾಗುತ್ತದೆ. ಇದರಿಂದ ಅಭಿಮಾನಿಗಳ ಪ್ರೀತಿ ಗೆಲುತ್ತದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

Chikkaballapur: ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಸುಧಾಕರ್

ಶಿವಮೊಗ್ಗ-ಶಿಕಾರಿಪುರ- ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಕೇಂದ್ರ ಸರ್ಕಾರ 500ಕೋಟಿ ರು. ಮಂಜೂರು ಮಾಡಿದೆ. ಅದರ ಶಂಕುಸ್ಥಾಪನೆಯೂ ಫೆ.27ರಂದು ಪ್ರಧಾನಿ ನೆರವೇರಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರ ಜೋಡಿ ನಿರಂತರವಾಗಿ ಅಭಿವೃದ್ಧಿ ಮಾಡಿಕೊಂಡು ಬಂದಿದ್ದಾರೆ. 7 ಕೊಳಚೆ ಪ್ರದೇಶದಲ್ಲಿ ಮನೆಗಳಿಗೆ ಹಕ್ಕುಪತ್ರ, ಮನೆಗೆ ಪ್ರಧಾನಮಂತ್ರಿ ಅವಾಜ್‌ ಯೋಜನೆಯಡಿ ನಿರ್ಮಾಣಗೊಂಡಿರುವ 3000 ಬಡವರ ಮನೆಗಳಿಗೆ ಹಕ್ಕುಪತ್ರ ನೀಡುವುದು ಪುಣ್ಯದ ಕೆಲಸ ಎಂದು ಹೇಳಿದರು.

ಕರ್ನಾಟಕದಲ್ಲಿ ಶಿವಮೊಗ್ಗ ಭವಿಷ್ಯದ ನಗರ: ಒಬ್ಬ ಜನ ಸೇವಕ ಯಾವ ರೀತಿ ಇರಬೇಕು ಎಂಬುದಕ್ಕೆ ಮಾದರಿಯಾಗಿ ಈಶ್ವರಪ್ಪ ಅವರು ಶಿವಮೊಗ್ಗ ನಗರದಲ್ಲಿ ಕೆಲಸ ಮಾಡಿದ್ದಾರೆ. ಅವರ ಅಭಿವೃದ್ದಿ ಕಾರ್ಯ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿವೆ. ಸಣ್ಣ ಸಮುದಾಯವನ್ನು ಮುಟ್ಟಿದ್ದಾರೆ. ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಶಿವಮೊಗ್ಗ. ಶಿವಮೊಗ್ಗ ನಗರಕ್ಕೆ ಉತ್ತಮ ಭವಿಷ್ಯ ಇದೆ. ರಾಜ್ಯದಲ್ಲಿ ಯಾವುದಾದರೂ ಭವಿಷ್ಯದ ನಗರ ಇದ್ದರೆ ಅದು ಶಿವಮೊಗ್ಗ ನಗರ ಮಾತ್ರ ಎಂದು ಬಣ್ಣಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, 2006ರಲ್ಲಿ ಇದ್ದ ಅಂದಿನ ಶಿವಮೊಗ್ಗಕ್ಕೂ 2023ರ ಇಂದಿನ ಶಿವಮೊಗ್ಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. 18 ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆ ಸರ್ವತೋಮುಖ ಅಭಿವೃದ್ಧಿ ಕಂಡಿದೆ. ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಶಿವಮೊಗ್ಗದ ಅಭಿವೃದ್ಧಿ ನಿಂತ ನೀರಾಗಿತ್ತು. ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಪರ್ವವೇ ಆಗಿದೆ. ಇದಕ್ಕೆ ಈಶ್ವರಪ್ಪ, ಡಿ.ಎಚ್‌.ಶಂಕರಮೂರ್ತಿ ಅವರಂ​ಥ ಹಿರಿಯ ನಾಯಕರೂ ಕಾರಣ ಎಂದರು. ಪ್ರಧಾನಿ ಮೋದಿ ಅವರನ್ನು ಇಡೀ ಜಗತ್ತೆ ಮೆಚ್ಚಿಕೊಂಡಿದೆ. ಅವರು ಜಗತ್ತಿನ ನ. 1 ನಾಯಕರಾಗಿದ್ದಾರೆ. ಫೆ.27ರಂದು ಶಿವಮೊಗ್ಗ ವಿಮಾಣ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಅವರು ಆಗಮಿಸಲಿದ್ದಾರೆ. ಅಂದು 2ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕರ್ನಾಟಕದಿಂದ ಅಯೋಧ್ಯೆಗೆ ಹೋಗ್ತಿದೆ ಪುಣ್ಯ ಜಲ: ಬಜರಂಗದಳದಿಂದ ವಿಶೇಷ ಕಾರ್ಯ

ಶಾಸಕ ಕೆ.ಎಸ್‌.ಈಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಕೆ.ಬಿ.ಅಶೋಕ ನಾಯ್ಕ, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ, ಭಾರತಿ ಶೆಟ್ಟಿ, ಡಿ.ಎಸ್‌.ಅರುಣ್‌, ಮಹಾನಗರಪಾಲಿಕೆ ಮೇಯರ್‌ ಶಿವಕುಮಾರ್‌, ಜಿಲ್ಲಾಧಿಕಾರಿ ಎಸ್‌.ಸೆಲ್ವಮಣಿ, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಮಿಥುನ್‌ ಕುಮಾರ್‌, ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಗಣ್ಯರು ಉಪಸ್ಥಿತರಿದ್ದರು.

Follow Us:
Download App:
  • android
  • ios