*   ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗ ಆಯೋಗದಿಂದ ಪರಿಶೀಲನೆ*   ರಾಜ್ಯದಲ್ಲಿ ಈ ವಿಚಾರ ಕೋರ್ಟ್‌ನಲ್ಲಿದೆ: ಸಿಎಂ*   ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ವಿಚಾರ 

ಹುಬ್ಬಳ್ಳಿ(ಆ.23): ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ಪರಿಶೀಲನೆ ನಡೆಸುತ್ತಿದೆ, ಈ ಬಗ್ಗೆ ವಿರೋಧ ಪಕ್ಷ ಮಾತ್ರವಲ್ಲದೆ ಯಾರು ಬೇಕಾದರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ವಿಚಾರಕ್ಕೆ ಸಂಬಂಧಿಸಿ ಭಾನುವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಬಿಸಿ ಜಾತಿ ಗಣತಿ ವಿಚಾರವಾಗಿ ಮೋದಿ ಅವರನ್ನು ಭೇಟಿಯಾಗುವುದಾದರೆ ಆಗಲಿ, ಅವರನ್ನು ಭೇಟಿಯಾಗಲು ಎಲ್ಲರಿಗೂ ಅವಕಾಶವಿದೆ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ಮಾಡಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ; ಸರ್ಕಾರಕ್ಕೆ ಗುಂಡೂರಾವ್ ಒತ್ತಾಯ!

ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗ ಆಯೋಗ ಪರಿಶೀಲನೆ ನಡೆಸುತ್ತಿದೆ. ಇನ್ನು ರಾಜ್ಯದಲ್ಲಿ ಈ ವಿಚಾರ ಕೋರ್ಟ್‌ನಲ್ಲಿದ್ದು, ಇತ್ಯರ್ಥಕ್ಕೆ ಕಾಲವಕಾಶ ತೆಗೆದುಕೊಳ್ಳುತ್ತದೆ. ಈ ಬಗ್ಗೆ ವಿರೋಧ ಪಕ್ಷ ಮಾತ್ರವಲ್ಲ, ಯಾರು ಬೇಕಾದರೂ ಪ್ರಧಾನಿಗಳನ್ನು ಭೇಟಿಯಾಗಬಹುದು ಎಂದು ಹೇಳಿದ್ದಾರೆ.