ಪ್ರತಿಯೊಬ್ಬರು ಐದು ಗಿಡಗಳನ್ನು ಬೆಳೆಸಿ: ಸಿಎಂ ಬೊಮ್ಮಾಯಿ

*   ಮಾಚೋಹಳ್ಳಿಯಲ್ಲಿ 15ಹೆಕ್ಟೇರ್‌ ಪ್ರದೇಶದಲ್ಲಿ ವೃಕ್ಷೋದ್ಯಾನ
*  15 ಹೆಕ್ಟೇರ್‌ ಪ್ರದೇಶದಲ್ಲಿ ನಿರ್ಮಾಣ
*  ಬೆಂಗಳೂರಿನ ಸುತ್ತಲೂ ಅರಣ್ಯ ಬೆಳೆಸಲು ಆದ್ಯತೆ ನೀಡಿ

CM Basavaraj Bommai Talks Over Increase Forest in Karnataka grg

ಬೆಂಗಳೂರು(ಜು.03):  ಅರಣ್ಯ ಪ್ರದೇಶ ಹೆಚ್ಚಳಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಐದು ಗಿಡಗಳನ್ನು ನೆಟ್ಟು ತಮ್ಮ ಪ್ರೀತಿ ಪಾತ್ರರ ಹೆಸರಿಟ್ಟು ಬೆಳೆಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆಕೊಟ್ಟರು.

ದಾಸನಪುರ ಹೋಬಳಿಯ ಮಾಚೋಹಳ್ಳಿ ವೃಕ್ಷೋದ್ಯಾನಕ್ಕೆ ಚಾಲನೆ ಮತ್ತು ವನಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅರಣ್ಯೀಕರಣಕ್ಕೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರವೇ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ತಲಾ ಐದು ಗಿಡಗಳನ್ನು ನೆಡಬೇಕು ಎಂದರು.

ಹಳ್ಳಿ, ಪಟ್ಟಣಕ್ಕೆ ನೀರೊದಗಿಸಲು 2,500 ಕೋಟಿ: ಸಿಎಂ ಬೊಮ್ಮಾಯಿ

ವಾರ್ಷಿಕ 100 ಕೋಟಿ ಅನುದಾನ:

ಪ್ರಸಕ್ತ ಸಾಲಿನ ಅಯವ್ಯಯದಲ್ಲಿ ಹಸಿರು ಬಜೆಟ್‌ ರೂಪಿಸಲಾಗಿದೆ. ಪರಿಸರ ಹಾನಿಯನ್ನು ಸರಿದೂಗಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, ಕ್ರಿಯಾ ಯೋಜನೆ ಸಿದ್ಧವಾಗುತ್ತಿದೆ. ಪ್ರತಿ ವರ್ಷವೂ ಪರಿಸರದ ಹಾನಿಯಿಂದಾಗುವ ಕೊರತೆಯನ್ನು ನೀಗಿಸುವ ಯೋಜನೆಗಳನ್ನು ರೂಪಿಸಲು ಅರಣ್ಯ ಇಲಾಖೆಗೆ 100 ಕೋಟಿ ರು.ಗಳನ್ನು ಒದಗಿಸಲಾಗುವುದು. ಬೀಜೋತ್ಸವ ಕಾರ್ಯಕ್ರಮವನ್ನು ರೂಪಿಸಿ ಎರಡೂವರೆ ಕೋಟಿ ಬೀಜಗಳನ್ನು ಈ ವರ್ಷ ಬಿತ್ತಲಾಗುತ್ತಿದೆ. ಅರಣ್ಯವೆಂದು ಗುರುತಿಸಲ್ಪಡುವ ಪ್ರದೇಶಗಳಲ್ಲಿ ಬೀಜಗಳನ್ನು ಬಿತ್ತುವ ಹಾಗೂ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಮಾಡಲಾಗುವುದು ಎಂದು ತಿಳಿಸಿದರು.

ಅರಣ್ಯ ಪ್ರದೇಶ ಶೇ.21 ರಿಂದ 30ಕ್ಕೆ ಹೆಚ್ಚಳ:

ರಾಜ್ಯದದಲ್ಲಿರುವ ಶೇ. 21 ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ. 30 ಕ್ಕೆ ಏರಿಸಬೇಕು. ಈ ದಿಸೆಯಲ್ಲಿ ಅರಣ್ಯ ಇಲಾಖೆಗೆ ಎಲ್ಲ ಸಹಕಾರವನ್ನು ನೀಡಲಾಗುವುದು. ಪ್ರತಿಯೊಂದು ಕ್ಷೇತ್ರದಲ್ಲಿ ಕನಿಷ್ಟನೂರು ಎಕರೆ ಪ್ರದೇಶದಲ್ಲಿ ಅರಣ್ಯೀಕರಣ ಮಾಡುವ ಕೆಲಸವನ್ನು ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌, ಅಪರ ಮುಖ್ಯಕಾರ್ಯದರ್ಶಿ ಜಾವೇದ್‌ ಅಖ್ತರ್‌, ಕರ್ನಾಟಕ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷ ಮದನ್‌ ಗೋಪಾಲ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್‌ಕೆ ಸಿಂಗ್‌ ಉಪಸ್ಥಿತಿರಿದ್ದರು.

ಸಾಲುಮರದ ತಿಮ್ಮಕ್ಕಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ, ಜನ್ಮದಿನದಂದೇ ಸಿಕ್ತು ವಿಶೇಷ ಉಡುಗೊರೆ

ಬೆಂಗಳೂರಿನ ಸುತ್ತಲೂ ಅರಣ್ಯ ಬೆಳೆಸಲು ಆದ್ಯತೆ ನೀಡಿ:

ಬೆಂಗಳೂರು ನಗರ ನಿರೀಕ್ಷೆಗೂ ಮೀರಿ ಬೆಳೆಯುತ್ತಿದೆ. ನಗರದ ಸುತ್ತಲೂ ಅರಣ್ಯ ಉದ್ಯಾನವನ ಬೆಳೆಸಲು ವಿಶೇಷ ಕಾರ್ಯಕ್ರಮವನ್ನು ರೂಪಿಸಬೇಕು. ಮಾಚೋಹಳ್ಳಿಯ ಟ್ರೀ ಪಾರ್ಕ್ ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಹೆಚ್ಚಿನ ಸಾರ್ವಜನಿಕರು ಇಲ್ಲಿಗೆ ಬರುವಂತೆ ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

15 ಹೆಕ್ಟೇರ್‌ ಪ್ರದೇಶದಲ್ಲಿ ನಿರ್ಮಾಣ

ಬೆಂಗಳೂರು ಮಿಷನ್‌ 2022 ಬೆಂಗಳೂರು ನವಚೈತನ್ಯ ಕಾರ್ಯಕ್ರಮದಡಿ ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿ ವೃಕ್ಷೋದ್ಯಾನವನವನ್ನು ಸ್ಥಾಪಿಸಲಾಗಿದೆ. 15 ಹೆಕ್ಟೇರ್‌ನಲ್ಲಿ ಅಭಿವೃದ್ಧಿ ಪಡೆಸಿದ್ದು, ಸಾರ್ವಜನಿಕರ ವಾಯುವಿಹಾರಕ್ಕೆ ಅನುಕೂಲಕರ ವ್ಯವಸ್ಥೆಗಳನ್ನು ನಿರ್ಮಿಸಲಾಗಿದೆ. ಅರಳಿ ಕಟ್ಟೆ, ನಡುಗೆಪಥ, ವ್ಯಾಯಾಮ ಸಲಕರಣೆಗಳು, ಕೃತಕ ಜಲಪಾತ ನಿರ್ಮಾಣ, ಮಕ್ಕಳ ಆಟದ ಸಾಮಗ್ರಿಗಳು, ಔಷಧಿ ವನವು ಈ ವೃಕ್ಷೋದ್ಯಾನದ ಆಕರ್ಷಣೆಯಾಗಿವೆ.
 

Latest Videos
Follow Us:
Download App:
  • android
  • ios