ಒಕ್ಕಲಿಗ ಸಮುದಾಯದ ಎಲ್ಲಾ ಶಾಸಕರು ಒಕ್ಕಲಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಶೋತ್ತರಗಳು ಈಡೇರಬೇಕು. ಅವಕಾಶಗಳು ಹೆಚ್ಚಾಗಬೇಕೆಂಬ ಹಿನ್ನೆಲೆಯಲ್ಲಿ ಈಗಿನ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾಗಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿ 

ಸುವರ್ಣಸೌಧ(ಡಿ.24):  ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆದಷ್ಟು ಶೀಘ್ರವಾಗಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯದ ಎಲ್ಲಾ ಶಾಸಕರು ಒಕ್ಕಲಿಗ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಶೋತ್ತರಗಳು ಈಡೇರಬೇಕು. ಅವಕಾಶಗಳು ಹೆಚ್ಚಾಗಬೇಕೆಂಬ ಹಿನ್ನೆಲೆಯಲ್ಲಿ ಈಗಿನ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚಳವಾಗಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ. ಅದೇ ಸಮುದಾಯಕ್ಕೆ ಹೊಂದಿಕೊಂಡಿರುವ ರೆಡ್ಡಿ, ಬಂಟ ಸೇರಿದಂತೆ ಎಲ್ಲ ಸಮುದಾಯಗಳ ಮೀಸಲಾತಿ ಅಗತ್ಯ. ಕುಂಚಿಟಿಗ ಸಮುದಾಯದ್ದು, ಕೇಂದ್ರದ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ಸಮುದಾಯವನ್ನು ಕೇಂದ್ರದ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಅವರು ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ ಎಂದರು.

ಪಂಚಮಸಾಲಿಗೆ 2ಸಿ ಅಥವಾ 3ಸಿ ಮೀಸಲು?: ಹೊಸ ವರ್ಗೀಕರಣಕ್ಕೆ ಸರ್ಕಾರ ಚಿಂತನೆ

ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಹಿಂದೆಯೇ ಸಭೆ ನಡೆಸಿ ಮನವಿಯನ್ನು ಕೊಟ್ಟಿದ್ದರು. ಆ ಮನವಿಯನ್ನು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಲಾಗಿದೆ. ಅದರ ಪರಿಷ್ಕರಣೆ ಕೂಡ ಆಗುತ್ತಿದೆ. ಸಂವಿಧಾನ ದತ್ತವಾದ ಆಯೋಗದ ಶಿಫಾರಸಿನ ಅಗತ್ಯವಿದೆ. ಹೀಗಾಗಿ ಕಳೆದ ನವೆಂಬರ್‌ 29ರಂದು ಮನವಿಯನ್ನು ಕಳುಹಿಸಲಾಗಿದೆ. ಇದರ ಅಂಶಗಳನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಸಚಿವರಾದ ಅಶೋಕ್‌ ಅವರ ನೇತೃತ್ವದ ನಿಯೋಗವು ಕೊಟ್ಟಿರುವ ಮನವಿಯನ್ನೂ ಸಹ ಆಯೋಗಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.