Asianet Suvarna News Asianet Suvarna News

ಜಲವಿವಾದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ

*  ದೆಹಲಿಯಲ್ಲಿ ನೀರಾವರಿ ತಜ್ಞರು, ವಕೀಲರ ಜತೆಗೆ ಸಿಎಂ ಚರ್ಚೆ
*  ನ್ಯಾಯಾಲಯದಲ್ಲಿರುವ ವ್ಯಾಜ್ಯಗಳ ಕುರಿತು ಮಾಹಿತಿ ಪಡೆದ ಸಿಎಂ
*  ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ತಜ್ಞರ ಜತೆ ಚರ್ಚೆ
 

CM Basavaraj Bommai Talks Over Water Dispute grg
Author
Bengaluru, First Published Aug 27, 2021, 8:25 AM IST
  • Facebook
  • Twitter
  • Whatsapp

ನವದೆಹಲಿ(ಆ.27): ಸುಪ್ರೀಂ ಕೋರ್ಟ್‌ನಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ನವದೆಹಲಿಯಲ್ಲಿ ಗುರುವಾರ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಅವರು ಈ ವಿಚಾರ ತಿಳಿಸಿದರು. ನೀರಾವರಿ ಯೋಜನೆಗಳ ಕುರಿತು ದೆಹಲಿಯಲ್ಲಿ ರಾಜ್ಯದ ಪರ ವಕೀಲರು ಹಾಗೂ ಜಲಸಂಪನ್ಮೂಲ ಇಲಾಖೆಯ ತಾಂತ್ರಿಕ ತಜ್ಞರ ಜತೆಗೆ ಚರ್ಚೆ ನಡೆಸಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಅಕ್ರಮವಾಗಿ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ಕೇಂದ್ರ ಆರೋಗ್ಯ ಸಚಿವರ ಭೇಟಿಯಾದ ಕರ್ನಾಟಕ ಸಿಎಂ ಬೊಮ್ಮಾಯಿ!

ತಮಿಳುನಾಡು ನದಿ ಜೋಡಣೆ ಯೋಜನೆಗಳು ಕಾನೂನು ಬಾಹಿರವಾಗಿದ್ದು, ಆ ಬಗ್ಗೆ ತಜ್ಞರ ಜತೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ನಮ್ಮ ನಿಲುವನ್ನು ಸ್ಪಷ್ಟಪಡಿಸುವ ಕುರಿತು ಹಾಗೂ ತಮಿಳುನಾಡಿನ ಮಧುರೈ ನ್ಯಾಯಾಲಯದಲ್ಲಿ ದಾಖಲಾಗಿರುವ ಖಾಸಗಿ ಪ್ರಕರಣದ ಕುರಿತು ಚರ್ಚಿಸಲಾಗಿದೆ. ಕಾವೇರಿ ನದಿ ವ್ಯಾಜ್ಯವು ಮಧುರೈ ವ್ಯಾಪ್ತಿಗೆ ಬಾರದ ಕಾರಣ ಆ ಪ್ರಕರಣವನ್ನು ರದ್ದುಪಡಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಈ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌, ಸಂಸದ ಶಿವಕುಮಾರ್‌ ಉದಾಸಿ ಇದ್ದರು.
 

Follow Us:
Download App:
  • android
  • ios