Asianet Suvarna News Asianet Suvarna News

ದೊಡ್ಡಬಳ್ಳಾಪುರ ಸೇರಿ 5 ಕಡೆ ಜನೋತ್ಸವ: ಸಿಎಂ ಬೊಮ್ಮಾಯಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಜನೋತ್ಸವ ಸಮಾರಂಭ ಇದೇ ತಿಂಗಳು 28ರಂದು ನಡೆಯಲಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರ ತಿಳಿಸಿದ್ದಾರೆ. 

cm basavaraj bommai to hold janotsava 5 places in karnataka gvd
Author
Bangalore, First Published Aug 14, 2022, 3:30 AM IST

ಬೆಂಗಳೂರು (ಆ.14): ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಜನೋತ್ಸವ ಸಮಾರಂಭ ಇದೇ ತಿಂಗಳು 28ರಂದು ನಡೆಯಲಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ತಿಂಗಳು 28ರಂದು ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದು. ಕಳೆದ ತಿಂಗಳು ಜು.28ಕ್ಕೆ ನಡೆಸಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ರದ್ದು ಮಾಡಲಾಗಿತ್ತು. 10-15 ದಿನಗಳಿಂದ ಈ ಬಾಗದ ಜನರ ಒತ್ತಾಯ ಹೆಚ್ಚಾಗಿದ್ದು, ಬೇರೆ ಕಡೆ ಸಮಾವೇಶ ಮಾಡಲು ಜನತೆ ಒಪ್ಪಲಿಲ್ಲ. ನಾವು ಸಾಕಷ್ಟುತಯಾರಿ ನಡೆಸಿದ್ದು, ದೊಡ್ಡಬಳ್ಳಾಪುರದಿಂದಲೇ ಜನೋತ್ಸವ ಪ್ರಾರಂಭವಾಗಬೇಕು. ಹೀಗಾಗಿ ಮೊದಲ ಹೆಜ್ಜೆ ಇಟ್ಟಿದ್ದು, ಇಲ್ಲಿಂದಲೇ ಜನೋತ್ಸವ ಆರಂಭವಾಗಲಿ ಎಂಬುದು ನಮಗಿಂತಲೂ ಹೆಚ್ಚಿನ ದೃಢ ನಿರ್ಧಾರ ಅವರದಾಗಿದೆ. ಅವರ ಉತ್ಸಾಹ ನಿರ್ಣಯಕ್ಕೆ ತಲೆಬಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ: ಅರುಣ್‌ ಸಿಂಗ್‌ ಸ್ಪಷ್ಟೋಕ್ತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾಗಿದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿತ್ತು. ಇದೀಗ ಇದೇ ತಿಂಗಳು 28 ರಂದು ನಡೆಸಲು ತೀರ್ಮಾನಿಸಲಾಗಿದೆ.

ಬಿಎಸ್‌ವೈಗೆ ಆಹ್ವಾನ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಸಾಧನಾ ಸಮಾವೇಶ ‘ಜನೋತ್ಸವ’ ಕಾರ್ಯಕ್ರಮವನ್ನು ಜುಲೈ 28ರಂದು ನಡೆಸಲು ತೀರ್ಮಾನಿಸಿತ್ತು. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆಯಾಗಿತ್ತು. ಇದರಿಂದ ಸಾಧನಾ ಸಮಾವೇಶವನ್ನು ಸ್ವತಃ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿದ್ದರು. ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಇಂದು(ಶುಕ್ರವಾರ) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. 

ಪ್ರಣಾಳಿಕೆಯಂತೆ ಎಸಿಬಿ ರದ್ದು: ಸಿಎಂ ಬೊಮ್ಮಾಯಿ

ಆಗಸ್ಟ್ 28ರಂದು ನಡೆಯುವ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿ ಇಟ್ಟುಕೊಂಡು ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ. ಇತ್ತೀಚೆಗೆ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮ ಯಶ್ವಸ್ವಿಯಾಗಿದೆ. ಇದರಿಂದ ಬಿಜೆಪಿಯನ್ನು ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕೌಂಟರ್ ಕೊಡಲು ಬಿಜೆಪಿ ಪ್ಲಾನ್ ಮಾಡಿದೆ. ಅದಕ್ಕೆ ಮೊದಲ ಹಂತವಾಗಿ ಈ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. 

Follow Us:
Download App:
  • android
  • ios