ತಾಲೂಕು ಆಡಳಿತ ಸೌಧ ಉದ್ಘಾಟನೆಗೆ ಸಿಎಂ ಬೊಮ್ಮಾಯಿ ಮೂಲ್ಕಿ- ಮೂಡುಬಿದಿರೆ ಕ್ಷೇತ್ರ  ಅಭಿವೃದ್ಧಿ ಯೋಜನೆಗೆ ಶಿಲನ್ಯಾಸ ಸಿಎಂ ಆಗಮನದ ಹಿನ್ನಲೆಯಲ್ಲಿ ಭರ್ಜರಿ ತಯಾರಿ

ಮೂಡುಬಿದಿರೆ(ಏ.24): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್‌ 27ರಂದು ಮೂಡುಬಿದಿರೆಗೆ ಆಗಮಿಸಲಿದ್ದು ತಾಲೂಕು ಆಡಳಿತ ಸೌಧ ಕಟ್ಟಡದ ಉದ್ಘಾಟನೆ ಮತ್ತು ಮೂಲ್ಕಿ- ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಶಾಸಕ ಉಮಾನಾಥ್‌ ಕೋಟ್ಯಾನ್‌ ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಕಳೆದ ನಾಲ್ಕು ವರುಷಗಳಲ್ಲಿ 100 ಕೋಟಿಗೂ ಮಿಕ್ಕಿದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಸಲಾಗಿದ್ದು, ಕೇಂದ್ರ ಸರ್ಕಾರದ 400 ಕೋಟಿಗೂ ಮಿಕ್ಕಿದ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಷಯ ಪ್ರಸ್ತಾಪಿಸಿದ ಸಿಎಂ

27ರಂದು ಒಟ್ಟು 374.71 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆಯ ದರೆಗುಡ್ಡೆ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡದ ಉದ್ಘಾಟನೆ, ಬನ್ನಡ್ಕದಲ್ಲಿ ನಿರ್ಮಾಣವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕಾಲೇಜಿನ ಉದ್ಘಾಟನೆ, ಮುಲ್ಕಿ ಸಮುದಾಯ ಆರೋಗ್ಯಕೇಂದ್ರದ ಹೊರರೋಗಿ ವಿಭಾಗದ ಉದ್ಘಾಟನೆ, ಲೋಕೋಪಯೋಗಿ ಇಲಾಖೆಯಡಿ ವಿದ್ಯಾಗಿರಿಯಿಂದ ಸ್ವರಾಜ್ಯ ಮೈದಾನದವರೆಗೆ ದ್ವಿಪಥ ಹಾಗೂ ರೋಟರಿ ಶಾಲೆ ಬಳಿಯಿಂದ ಮೆಸ್ಕಾಂ ಜಂಕ್ಷನ್‌ ವರೆಗೆ ಚತುಷ್ಪಥ ರಸ್ತೆಯ ಉದ್ಘಾಟನೆ, ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಿಪ್ಪಾಡಿ ಮತ್ತು ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳಾಯಂಗಡಿ ಬಳಿ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟುಗಳ ಉದ್ಘಾಟನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಇದರ ನೂತನ ಕಟ್ಟಡದ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಲಿದ್ದಾರೆ.

ಏ. 29ರಂದು ಸಿಎಂ ದಿಲ್ಲಿ ಭೇಟಿ: ಸಂಪುಟ ಬಗ್ಗೆ ಚರ್ಚೆ ಸಾಧ್ಯತೆ

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ಮೀನುಗಾರಿಕಾ ಸಚಿವ ಎಸ್‌. ಅಂಗಾರ ಎಸ್‌, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಂದಾಯ ಸಚಿವ ಆರ್‌. ಅಶೋಕ್‌, ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್‌್ಥ ನಾರಾಯಣ, ಆರೋಗ್ಯ ಸಚಿವ ಡಾ.ಕೆ. ಸುಧಾಕರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ಪಾಟೀಲ್‌ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಸುನೀಲ್‌ ಆಳ್ವ, ಪುರಸಭಾ ಅಧ್ಯಕ್ಷ ಪ್ರಸಾದ್‌ ಕುಮಾರ್‌, ಬಿಜೆಪಿ ಪಕ್ಷದ ಪ್ರಮುಖರಾದ ಗೋಪಾಲ್‌ ಶೆಟ್ಟಿಗಾರ್‌, ಲಕ್ಷ್ಮಣ್‌ ಪೂಜಾರಿ, ಕೇಶವ ಕರ್ಕೇರ ಇದ್ದರು.

ಪತ್ರಿಕಾ ಭವನಕ್ಕೆ ಶಿಲಾನ್ಯಾಸ: ಪ್ರವಾಸಿ ಮಂದಿರದ ಸಮೀಪ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಲಭ್ಯವಾದ ಭೂಮಿಯಲ್ಲಿ ‘ಪತ್ರಿಕಾ ಭವನ’ ನಿರ್ಮಾಣಕ್ಕೆ ಅಂದು ಮಧ್ಯಾಹ್ನ 1.15 ಗಂಟೆಗೆ ಮುಖ್ಯಮಂತ್ರಿ ಶಿಲಾನ್ಯಾಸ ನೆರವೇರಿಸುವರು. ಈ ಸಂದರ್ಭ ಶಾಸಕ ಸಹಿತ ವಿವಿಧ ಸಚಿವರು ಅಧಿಕಾರಿಗಳು ಉಪಸ್ಥಿತರಿರುತ್ತಾರೆ.