ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಮೂರನೇ ಅಲೆ ಬರಬಹುದು ಎಂಬ ಎಚ್ಚರಿಕೆ  ತಜ್ಞರು ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತುಸಭೆ ಆ. 30ರಂದು ತಜ್ಞರ ಮತ್ತು ಕೋವಿಡ್‌ ಕಾರ್ಯಪಡೆ ಸದಸ್ಯರ ಸಭೆ

ಬೆಂಗಳೂರು (ಆ.25): ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಮೂರನೇ ಅಲೆ ಬರಬಹುದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ತಜ್ಞರು ನೀಡಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈ ತಿಂಗಳ 30ರಂದು ತಜ್ಞರ ಮತ್ತು ಕೋವಿಡ್‌ ಕಾರ್ಯಪಡೆ ಸದಸ್ಯರ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಲಸಿಕೆ ಪಡೆಯಿರಿ, ಕೋವಿಡ್‌ ಮಾರ್ಗಸೂಚಿ ಪಾಲಿಸಿ : ಉಪರಾಷ್ಟ್ರಪತಿ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಇರುವ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಮುಂದುವರಿಯಲು ಸೂಚಿಸಲಾಗಿದೆ. 

ಸಚಿವರ ನೇತೃತ್ವದ ಕೋವಿಡ್‌ ಕಾರ್ಯಪಡೆಗೆ ಹೊಸಬರನ್ನು ಸೇರಿಸಿಕೊಳ್ಳಬೇಕೇ ಅಥವಾ ಹಳಬರನ್ನೇ ಮುಂದುವರಿಸಬೇಕೇ ಎಂಬುದರ ಕುರಿತು ಚರ್ಚೆ ಮಾಡಲಾಗುವುದು. ಮೂರನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.