Asianet Suvarna News Asianet Suvarna News

CM Basavaraj Bommai: ಮೆಗಾ ಜವಳಿ ಪಾರ್ಕ್‌ಗೆ ಅನುದಾನ ಕೋರಿದ ಬೊಮ್ಮಾಯಿ

  • ಮೆಗಾ ಜವಳಿ ಪಾರ್ಕ್ಗೆ ಅನುದಾನ ಕೋರಿದ ಬೊಮ್ಮಾಯಿ
  • ಕೇಂದ್ರ ಸಚಿವರಾದ ರಾಜನಾಥ್‌,ಭೂಪೇಂದ್ರ,ಪಿಯೂಶ್‌ ಭೇಟಿ
  • ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಿಎಂ ಚರ್ಚೆ
CM bommai asked Union Minister to provide grant for Mega Textile Park rav
Author
First Published Nov 30, 2022, 3:15 AM IST

ನವದೆಹಲಿ (ನ.30) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್‌ ಹಾಗೂ ಕೇಂದ್ರ ಜವಳಿ ಸಚಿವಪಿಯೂಶ್‌ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಭೇಟಿಯ ವೇಳೆ ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯ ಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇ ಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್‌ರನ್ನು ಕೋರಿದರು.

ದಿಲ್ಲೀಲಿ ವಕೀಲರೊಂದಿಗೆ ಗಡಿ ವಿಚಾರ ಚರ್ಚೆ: ಸಿಎಂ ಬೊಮ್ಮಾಯಿ

ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್‌ರ ಭೇಟಿಯ ವೇಳೆ, ಗುಡೆಕೋಟೆ ಸ್ಲಾತ್‌ ಕರಡಿಧಾಮ ಹಾಗೂ ಭೀಮಾಗಡ್‌ ಅಭಯಾರಣ್ಯಗಳ ಸುತ್ತಮುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ ್ಮ ವಲಯ ಎಂದು ಘೋಷಿಸುವಂತೆ ಮನವಿ ಮಾಡಿದರು.

ಬಳಿಕ, ಜವಳಿ,ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್‌ ಗೋಯಲ…ರವರನ್ನು ಭೇಟಿ ಮಾಡಿದ ಬೊಮ್ಮಾಯಿ, ಕರ್ನಾಟಕದ ಕಲಬುರಗಿ, ತುಮಕೂರು, ವಿಜಯ ಪುರ ಜಿಲ್ಲೆಗಳಲ್ಲಿ ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಕೋರಿ, ಕೇಂದ್ರ ಸರ್ಕಾರದ ಮಿತ್ರಾ ಯೋಜನೆಯಡಿ ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸು ವಂತೆ ಮನವಿ ಮಾಡಿದರು.

ಇದೇ ವೇಳೆ, ರಾಜ್ಯಕ್ಕೆ ಹತ್ತು ಸಾವಿರ ಮೆಟ್ರಿಕ್‌ ಟನ್‌ ಅಕ್ಕಿ ಸರಬರಾಜನ್ನು ಸೀಮಿತಗೊಳಿಸಿರುವ ನೀತಿಯನ್ನು ಮರುಪರಿಶೀಲಿಸುವಂತೆ ಮನವಿ ಸಲ್ಲಿಸಿ, ಭಾರತೀಯ ಆಹಾರ ನಿಗಮದ ವತಿಯಿಂದ ಮಾಚ್‌ರ್‍ 23ರವರೆಗೆ ತೆರೆದ ಮಾರುಕಟ್ಟೆಮಾರಾಟ ಯೋಜನೆಯಡಿ 2 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಬಿಡುಗಡೆ ಮಾಡಬೇಕು ಎಂದು ಕೋರಿದರು.

ಶಿಗ್ಗಾಂವಿಯಲ್ಲಿ ಜವಳಿ ಪಾರ್ಕ್‌ಗೆ ಸಿಎಂ ಶಂಕು: ಕೃಷಿ ಉದ್ಯಮ ನೀತಿಯ ಭರವಸೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್‌ ಮತ್ತು ಮಧ್ಯಮ ನೀರಾವರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯ ದರ್ಶಿ ಮಂಜುನಾಥ್‌ ಪ್ರಸಾದ್‌,ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಉಪಸ್ಥಿತರಿದ್ದರು.

Follow Us:
Download App:
  • android
  • ios