ಕರ್ನಾಟಕದಲ್ಲಿ ಮತ್ತೆ ರಕ್ಕಸ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮನೆ, ಬೆಳೆ ಕಳೆದುಕೊಂಡು ಜನ ಕಂಗಾಲಾಗಿದ್ದಾರೆ.  

ಬೆಂಗಳೂರು, (ಆಗಸ್ಟ್. 28): ಕರ್ನಾಟಕದಲ್ಲಿಸ್ವಲ್ಪ ದಿನಗಳ ವರೆಗೆ ಬಿಡುಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಅತನ್ನ ಆರ್ಭಟ ಮುಂದುವರೆಸಿದ್ದಾನೆ. ಕಳೆದ ಎರಡ್ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದ, ಹಲವು ಜಿಲ್ಲೆಗಳಲ್ಲಿ ಭಾರೀ ನಷ್ಟ ಸಂಭವಿಸಿದೆ. ಕೆರೆ-ಟ್ಟೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ರೈತರು ಬೆಳೆದ ಬೆಳೆ ನೀರು ಪಾಲಾಗಿದ್ದು, ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಇನ್ನು ಈ ಬಗ್ಗೆ ಇಂದುಇಂದು(ಭಾನುವಾರ) ಗೃಹ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜತೆ ವಿಡಿಯೋ ಸಂವಾದ ನಡೆಸಿದ್ದು,ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೊಂಬೆನಗರಿ ಚನ್ನಪಟ್ಟಣದಲ್ಲಿ ಮಳೆ ಅವಾಂತರ: 200ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

Scroll to load tweet…

ಕೆರೆಗಳು ಒಡೆಯದಂತೆ ಹಾಗೂ ಬಿರುಕು ಬೀಳದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸಿ ಅಗತ್ಯವಿದ್ದೆಡೆ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳಬೇಕು. ದೊಡ್ಡ ಕೆರೆಗಳಿರುವಲ್ಲಿ ಜಾಗೃತರಾಗಿ ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಮೈಸೂರು ಹೆದ್ದಾರಿಯಲ್ಲಿ ಮಳೆಯಿಂದಾಗಿ ನೀರು ನಿಂತಿರುವುದರಿಂದ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಇಂದಿನಿಂದಲೇ ಅನುವು ಮಾಡಿಕೊಡುವಂತೆ ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೇಳಿದರು.

Scroll to load tweet…

ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿ ಮಾಡಬೇಕು. ಅಧಿಕಾರಿಗಳು ಸಂವಹನದ ಮೂಲಕ ಕಾರ್ಯನಿರ್ವಹಿಸಬೇಕು. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಸ್ತೆ ದುರಸ್ತಿ ಕೈಗೊಳ್ಳಬೇಕು. ಸಕಾಲದಲ್ಲಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ಸೂಚಿಸಿದರು.

ಕಾಳಜಿ ಕೇಂದ್ರಗಳಲ್ಲಿರುವವರಿಗೆ ಗುಣಮಟ್ಟದ ಆಹಾರ ಹಾಗೂ ಬಂಧುಗಳ ಮನೆಗೆ ತೆರಲಿರುವವರಿಗೆ ಆಹಾರ ಕಿಟ್ ಗಳನ್ನು ತಲುಪಿಸುವಂತೆ ಖಡಕ್ ಹೇಳಿದರು.

ಸಚಿವರಾದ ಎಸ್.ಟಿ. ಸೋಮಶೇಖರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಉಮೇಶ್ ಕತ್ತಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಗಿರುವ ಹಾನಿಯ ಕುರಿತು ವಿವರಿಸಿದರು. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.