Asianet Suvarna News Asianet Suvarna News

ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಾ ಬಂದಿದೆ. ಈ ಸ್ಮಾರಕವನ್ನು ಡಿಸೆಂಬರ್ ತಿಂಗಳಾಂತ್ಯದೊಳಗೆ ಅದ್ಧೂರಿ ಕಾರ್ಯಕ್ರಮದ ಮೂಲಕ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

CM Bommai to inaugurate Vishnuvardhan Memorial by December
Author
First Published Nov 27, 2022, 3:05 PM IST

ಬೆಂಗಳೂರು (ನ.27): ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಾ ಬಂದಿದೆ. ಈ ಸ್ಮಾರಕವನ್ನು ಡಿಸೆಂಬರ್ ತಿಂಗಳಾಂತ್ಯದೊಳಗೆ ಅದ್ಧೂರಿ ಕಾರ್ಯಕ್ರಮದ ಮೂಲಕ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಹಿಂದೆ ವಿಷ್ಣುವರ್ಧನ್ ಅವರಿದ್ದ  ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ  ಮನೆಯ  ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತಿ ವಿಷ್ಣುವಧನ್‌ ಅವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಈ ಮನೆಯಲ್ಲಿ ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಹೀಗಾಗಿ, ಅವರಿಗೆ ಶುಭ ಕೋರಲು ಇಲ್ಲಿಗೆ ಬಂದಿದ್ದೇನೆ ಎಂದರು. 

ಡಾ ವಿಷ್ಣುವರ್ಧನ್ 'ವಲ್ಮೀಕ' ನಿಲಯ: ಗೃಹಪ್ರವೇಶ ಫೋಟೋಗಳಿವು...

ವಿಷ್ಣುವರ್ಧನ್‌ ಕುಟುಂಬದೊಂದಿಗೆ ಚರ್ಚೆ:  ಇನ್ನು ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ  ಕಾರ್ಯಕ್ರಮವನ್ನು ವೈಭವಾಯುತವಾಗಿ ಆಯೋಜಿಸಲಾಗುವುದು ಎಂದರು.

ಚುಕ್ಕಿ ರೋಗ ತಡೆಗೆ ಕ್ರಮ: ಚಿಕ್ಕಮಗಳೂರಿನಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ  ಹಾವಳಿ   ಹೆಚ್ವಿದ್ದು,  ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ  ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು. 

Follow Us:
Download App:
  • android
  • ios