ಬೆಂಗಳೂರು(ಫೆ.10): ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇವೆ. ದಿನಾಂಕ ಯಾವಾಗ ಅಂತ ಚರ್ಚೆ ಮಾಡಿ ನಿಗದಿ ಮಾಡುತ್ತೇವೆ. ಈಗಾಗಲೇ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ. ಇನ್ನೊಂದು ವಾರದಲ್ಲಿ ಬಜೆಟ್ ಸಭೆ ಪೂರ್ಣಗೊಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಹೋರಾಟ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಏನೇನು ಮಾಡೋಕೆ ಸಾಧ್ಯ ಅದನ್ನು ಮಾಡೋಣ. ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ. 

ಯಡಿಯೂರಪ್ಪ ಭೇಟಿಯಾದ ಸ್ವಾಮೀಜಿಗಳ ದಂಡು: 40 ಸಂತರ ಬೇಡಿಕೆ ಏನು?

ಇಡೀ‌ ದೇಶದಲ್ಲಿ ಏನೇನು ಮಾಡಿದ್ದಾರೆ ಅದನ್ನು ನಾನು ಇಲ್ಲಿ ಮಾಡಿದ್ದೇನೆ. ಅದಕ್ಕಾಗಿ ನಾವು ಚರ್ಚೆ ಮಾಡ್ತಾ ಇದ್ದೇವೆ. ಈ ಸಂಬಂಧ ಕಾನೂನು ತಜ್ಞರ ಜತೆ, ಪ್ರಮುಖರ ಜತೆ  ಚರ್ಚೆ ಮಾಡಿ, ಏನು ಮಾಡೋಕೆ‌ ಸಾಧ್ಯವೋ ಅದನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ.