ಬೆಂಗಳೂರು, (ಆ.04): ರಾಜ್ಯದಲ್ಲಿ ಕೊರೋನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಇಷ್ಟು ದಿನ ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾ ಮತ್ತು ವಿಧಾನಸೌಧದಿಂದ ಆಡಳಿತ ನಡೆಸಿದ್ದ ಯಡಿಯೂರಪ್ಪ, ಕಳೆದೆರಡು ದಿನಗಳಿಂದ ಆಸ್ಪತ್ರೆಯಿಂದ ಆಡಳಿತ ನಡೆಸುತ್ತಿದ್ದಾರೆ.

ಹೌದು...ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿರೋ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬಿಎಸ್‌ವೈಗೆ ಕೊರೋನಾ, ಸಿಎಂ ಮನೆಗೆ ಕ್ವಾರಂಟೈನ್‌ ಸ್ಟಿಕ್ಕರ್!

ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು. ಆದರೂ ಆಸ್ಪತ್ರೆಯಿಂದಲೇ ಬಿಎಸ್‌ವೈ, ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸುವ ಸಂಬಂಧ ಇಂದು (ಮಂಗಳವಾರ) ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

ಸಭೆಯ ಮುಖ್ಯಾಂಶಗಳು: 

1. ಭಾರತ ಸರ್ಕಾರದ ಪಿ.ಎಂ.ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ  681 ವೆಂಟಿಲೇಟರ್ ಗಳು ದೊರಕಿವೆ. 

2. ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ 166 ಸೇರಿದಂತೆ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳ ಸಂಖ್ಯೆಯನ್ನು ಒಟ್ಟು 335ಕ್ಕೆ   ಹೆಚ್ಚಿಸಲಾಗಿದೆ. 

3. ಇದೆ ವಾರಾಂತ್ಯದಲ್ಲಿ ಉಳಿದ 346 ವೆಂಟಿಲೇಟರ್ ಗಳನ್ನು ಅಳವಡಿಸಲಾಗುವುದು. 

4. ಕೇಂದ್ರ ಸರ್ಕಾರ ರಾಜ್ಯಕ್ಕೆ ಒದಗಿಸಿರುವ 1279 ವೆಂಟಿಲೇಟರ್ ಗಳನ್ನು ಈ ಮಾಹೆಯ ಅಂತ್ಯದಲ್ಲಿ  ದೊರಕಲಿವೆ. 

5. ಈ ಎಲ್ಲಾ ವೆಂಟಿಲೇಟರ್ ಗಳನ್ನು ತಕ್ಷಣವೇ  ಅಳವಡಿಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು.

6. ಆಸ್ಪತ್ರೆಯ ಸಿಬ್ಬಂದಿ ಈ ವೆಂಟಿಲೇಟರ್ ಗಳನ್ನು ಬಳಸಬೇಕು.  

7. ಅನೆಸ್ಥಿಟಿಕ್ಸ್, ಪಾರಾ ಮೆಡಿಕಲ್ ಸಿಬ್ಬಂದಿಗಳನ್ನು ತಕ್ಷಣವೇ  ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು.

8.ವೆಂಟಿಲೇಟರ್ ಗಳನ್ನು ಒದಗಿಸಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಾಡಿರುವ ಮನವಿಯನ್ನು  ಪರಿಗಣಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ಕೋವಿಡ್ 19 ಸಂಬಂಧ  ತಾತ್ಕಾಲಿಕವಾಗಿ ಒದಗಿಸಲು ಷರತ್ತು ಮತ್ತು ನಿಯಮಗಳ ಬಗ್ಗೆ ತೀರ್ಮಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.