ಬೆಂಗಳೂರು[ಮಾ.15]: ಕೊರೋನಾ ವೈರಸ್‌ ಆತಂಕ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯದ ಪ್ರಮುಖ ಸಚಿವರನ್ನು ಪರೀಕ್ಷೆಗೊಳಪಡಿಸಲಾಯಿತು.

ಮಾಗಡಿ ರಸ್ತೆಯ ಚನ್ನೇನಹಳ್ಳಿಯಲ್ಲಿರುವ ಆರ್‌ಎಸ್‌ಎಸ್‌ ಜನಸೇವಾ ಸಂಸ್ಥೆಯಲ್ಲಿ ಶನಿವಾರ ನಡೆದ ಸಭೆಗೂ ಮುನ್ನ ತಪಾಸಣೆ ನಡೆಸಲಾಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವ ಎಸ್‌.ಟಿ.ಸೋಮಶೇಖರ್‌ ಸೇರಿದಂತೆ ಇತರರನ್ನು ಪರೀಕ್ಷೆಗೊಳಪಡಿಸಲಾಯಿತು. ದೈಹಿಕ ಉಷ್ಣಾಂಶದ ಬಗ್ಗೆ ಪರೀಕ್ಷೆ ಮಾಡಲಾಯಿತು.

'ತಂಗಿ ಶವದೊಂದಿಗೆ 2 ದಿನದಿಂದ ಮನೆಯಲ್ಲಿದ್ದೇನೆ, ಏನು ಮಾಡ್ಬೇಕಂತ ತಿಳೀತಿಲ್ಲ!'

ಇದೇ ವೇಳೆ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಮುಂಜಾಗ್ರತಾ ಕ್ರಮವಾಗಿ ಹ್ಯಾಂಡ್‌ ಸ್ಯಾನಿಟೈಸರ್‌ ಅನ್ನು ಬಳಕೆ ಮಾಡಲಾರಂಭಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಇತರೆ ನಾಯಕರು ತಮ್ಮ ಕಾರಿನಲ್ಲಿ ಹ್ಯಾಂಡ್‌ ಸ್ಯಾನಿಟೈಸರ್‌ ಇಟ್ಟುಕೊಂಡು ಬಳಸುತ್ತಿದ್ದಾರೆ. ನಳಿನ್‌ ಕುಮಾರ್‌ ಕಟೀಲ್‌ ಅವರು ಕಾರಿನ ಚಾಲಕನಿಗೆ ಸ್ಯಾನಿಟೈಸರನ್ನು ಬಳಕೆ ಮಾಡಿಕೊಂಡು ಕಾರಿನ ಬಾಗಿಲು ತೆಗೆಯಲು ಸೂಚಿಸಿದ್ದಾರೆ.