ಅಜ್ಜಂಪುರ[ಜ.15]: ಮದ್ಯ ಮಾರಾಟ ನಿಷೇಧ ಸೇರಿದಂತೆ ವಿವಿಧ ಆಶಯಗಳನ್ನು ಮುಂದಿಟ್ಟಸಾಣೇಹಳ್ಳಿಯ ಶ್ರೀ ತರಳಬಾಳು ಶಾಖಾ ಮಠದ ಶ್ರೀಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಅಪೇಕ್ಷೆಯನ್ನು ಪೂರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ಸ್ವಾಮೀಜಿ ಮಾತಿಗೆ ಸಿಎಂ ಸಹಮತ: ಹಾಗಾದ್ರೆ ಮದ್ಯ ನಿಷೇಧವಾಗುತ್ತಾ?

ಸೊಲ್ಲಾಪುರದಲ್ಲಿ ಮಂಗಳವಾರ ನಡೆದ ಶ್ರೀಗುರುಸಿದ್ಧರಾಮ ಶಿವಯೋಗಿಗಳ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂಜ್ಯರು ನನ್ನ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಆ ವಿಶ್ವಾಸವನ್ನು ಉಳಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಶ್ರೀಗಳ ಅಪೇಕ್ಷೆಯನ್ನು ಪೂರೈಸುತ್ತೇನೆ ಎಂದು ಸಹಮತ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಮದ್ಯಪಾನದಿಂದ ಹಲವು ರೀತಿಯಲ್ಲಿ ಜನರಿಗೆ ತೊಂದರೆ ಆಗುತ್ತಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಬೇಕು ಎಂದು ತಿಳಿಸಿದರು.