62ನೇ ವಸಂತಕ್ಕೆ ಕಾಲಿಟ್ಟ ಕುಮಾರಸ್ವಾಮಿ| ಹೆಚ್‌ಡಿಕೆಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ|ಕುಮಾರಣ್ಣನ ಹುಟ್ಟುಹಬ್ಬಕ್ಕೆ  ಶುಭಾಶಯ ತಿಳಿಸಿದ ಅಭಿಮಾನಿಗಳು, ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಸೇರಿದಂತೆ ವಿವಿಧ ಗಣ್ಯರು| 

ಬೆಂಗಳೂರು(ಡಿ.16): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಇಂದು(ಬುಧವಾರ) ಹುಟ್ಟುಹಬ್ಬದ ಸಂಭ್ರಮ. 62ನೇ ವಸಂತಕ್ಕೆ ಕಾಲಿಡುತ್ತಿರುವ ಕುಮಾರಸ್ವಾಮಿ ಅವರಿಗೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. 

ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. 

Scroll to load tweet…

'ಶೀಘ್ರ ಕುಮಾರಸ್ವಾಮಿಗೆ ಸಿಎಂ ಪಟ್ಟ : ಅಲ್ಲಿಂದಲೇ ಬಂತು ಹೇಳಿಕೆ'

ನೆಚ್ಚಿನ ಕುಮಾರಣ್ಣನ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು, ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಸೇರಿದಂತೆ ವಿವಿಧ ಗಣ್ಯರು ಹುಟ್ಟುಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ.