Asianet Suvarna News Asianet Suvarna News

ಕೊರೋನಾ ಕುರಿತು ಯಡಿಯೂರಪ್ಪ ನೇತೃತ್ವದ ಸಭೆಯ ಪ್ರಮುಖಾಂಶಗಳು

ಕೊರೋನಾ ನಿಯಂತ್ರಣ ಮಾಡುವ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ ನೋಡಿ.

CM BS yediyurappa meeting highlights with officers For Coronavirus Control
Author
Bengaluru, First Published Jun 22, 2020, 3:02 PM IST

ಬೆಂಗಳೂರು, (ಜೂನ್.22): ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಇಂದು (ಸೋಮವಾರ) ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ಅದರಲ್ಲೂ ಬೆಂಗಳೂರಿನ ಕೆಲ ವಾರ್ಡ್‌ಗಳನ್ನ ಕಂಪ್ಲಿಟ್ ಸೀಲ್‌ಡೌನ್ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. 

ಸಿದ್ದಾಪುರ, ವಿಶ್ವೇಶ್ವರಪುರ, ಕಲಾಸಿಪಾಳ್ಯ, ವಿದ್ಯಾರಣ್ಯಪುರ, ಧರ್ಮರಾಯಸ್ವಾಮಿ ದೇವಸ್ಥಾನ ಏರಿಯಾ ಸೀಲ್‌ಡೌನ್‌ ಮಾಡುವ ಬಗ್ಗೆ ನಿರ್ಧರಿಸಲಾಯಿತು.

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ಮತ್ತೊಂದು ರೂಲ್ಸ್ ಮಾಡಿದ ಸರ್ಕಾರ

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನು ಸಭೆಯಲ್ಲಿ ಕೊರೋನಾ ನಿಯಂತ್ರಣದ ಬಗ್ಗೆ ಹಲವು ಚರ್ಚೆಗಳಾಗಿದ್ದು, ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

* ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಆದೇಶಿಸಿದರು.

* ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ.

* ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ.

* ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು.

* ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ತಿಳಿಸಲಾಯಿತು.

* ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು.

* ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸುವುದು ನಮ್ಮ ಕರ್ತವ್ಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

* ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ.

* ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

Follow Us:
Download App:
  • android
  • ios