Asianet Suvarna News Asianet Suvarna News

KSRTC ನೌಕರರ ಬೇಡಿಕೆ ಈಡೇರಿಕೆ ಕಷ್ಟ: ಸಿಎಂ ಯಡಿಯೂರಪ್ಪ

ಕೋವಿಡ್‌ ಸಂಕಷ್ಟದಲ್ಲೂ ಹಿತ ಕಾಯ್ದಿದ್ದೇವೆ| ಪ್ರತಿಭಟನೆ ಮಾಡಿ ಜನರಿಗೆ ತೊಂದರೆ ಬೇಡ| ಬೇಡಿಕೆ ಈಡೇರಿಕಗೆ ಸಮಯ ಬೇಕು| ತಕ್ಷಣವೇ ಪ್ರತಿಭಟನೆ ಕೈಬಿಡಿ, ಕೆಲಸಕ್ಕೆ ಬನ್ನಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ| 

CM BS Yediyurappa React on KSRTC Employees Strike grg
Author
Bengaluru, First Published Dec 12, 2020, 9:38 AM IST

ಬೆಂಗಳೂರು(ಡಿ.12): ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟದಿಂದ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದು ತುಂಬಾ ಕಷ್ಟವಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕೂಡಲೇ ನೌಕರರು ತಮ್ಮ ಪ್ರತಿಭಟನೆಯನ್ನು ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದೂ ಅವರು ಮನವಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ‘ವಾಸ್ತವ ಪರಿಸ್ಥಿತಿಯನ್ನು ಸಾರಿಗೆ ನೌಕರರು ಅರಿತುಕೊಳ್ಳಬೇಕು. ಈ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನಿಸಲಾಗುತ್ತದೆ’ ಎಂದರು.

ಸಾರಿಗೆ ನೌಕರರ ಪ್ರತಿಭಟನೆ: ಸಂಧಾನಕ್ಕೆ ಮುಂದಾದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ

‘ಮಾರ್ಚ್‌ ತಿಂಗಳಿನಿಂದ ಕೋವಿಡ್‌-19 ಪರಿಣಾಮ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಆದಾಯ ಬಂದಿಲ್ಲ. ಆರ್ಥಿಕ ಸಂಕಷ್ಟಗಳ ನಡುವೆಯೂ ನೌಕರರ ಹಿತ ಕಾಪಾಡಿದ್ದೇವೆ. ಈಗ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಲಿದೆ. ಆದರೆ ಏಕಾಏಕಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟಇರುವಾಗ ಬೇಡಿಕೆಗಳನ್ನು ಈಡೇರಿಸಬೇಕಾದರೆ ಸಮಯವಾಕಾಶ ಬೇಕಾಗುತ್ತದೆ’ ಎಂದು ಮುಖ್ಯಮಂತ್ರಿಗಳು ಹೇಳಿದರು.

‘ಈ ಮುಷ್ಕರ ಕೈ ಬಿಡುವಂತೆ ಮುಖ್ಯಮಂತ್ರಿಯಾಗಿ ಸಾರಿಗೆ ನೌಕರರ ವಿನಂತಿಸುತ್ತೇನೆ. ಈಗಾಗಲೇ ಸಂಬಂಧಪಟ್ಟಸಚಿವರು ಮತ್ತು ಅಧಿಕಾರಿಗಳು ಕೂಡಾ ಮುಷ್ಕರನಿರತ ನೌಕರರೊಂದಿಗೆ ಮಾತುಕತೆ ನಡೆಸಿದ್ದಾರೆ. ಕೂಡಲೇ ನೌಕರರು ತಮ್ಮ ಪ್ರತಿಭಟನೆಯನ್ನು ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಕೋರಿದರು.
 

Follow Us:
Download App:
  • android
  • ios