Asianet Suvarna News Asianet Suvarna News

ಜನತಾ ಕರ್ಫ್ಯೂ ಬಗ್ಗೆ ಯಡಿಯೂರಪ್ಪ ವಿಶೇಷ ಮನವಿ: ಏನು ಹೇಳಿದ್ದಾರೆ ನೊಡಿ..!

ನಮ್ಮ ದೇಶದಲ್ಲಿ ಹೇಗಾದರೂ ಮಾಡಿ ಕೊರೊನಾ ವೈರಸ್ ಸೋಂಕು 3ನೇ ಹಂತ ತಲುಪಿ ಸಮುದಾಯಗಳಿಗೆ ಹರಡಬಾರದು ಎಂದು ಸರ್ಕಾರಗಳು, ಅಧಿಕಾರಿಗಳು, ಮೆಡಿಕಲ್​ ವರ್ಕರ್ಸ್, ಡಾಕ್ಟರ್ಸ್, ನರ್ಸ್​ಗಳು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಅಲ್ಲದೇ ಮೊದಿ ಅವರು ಜನತಾ ಕರ್ಫ್ಯೂ ಪಾಲನೆಗೆ ಕರೆ ಕೊಟ್ಟಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಪತ್ರಿಕಾ ಪ್ರಕಟಣೆ ಮೂಲಕ ಜನತೆಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

Cm BS Yediyurappa requests To Karnataka people Over Janata Curfew
Author
Bengaluru, First Published Mar 21, 2020, 5:30 PM IST

ಬೆಂಗಳೂರು, [ಮಾ.21]: ಕೊರೋನಾ ವೈರಸ್ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಅಂದ್ರೆ ಭಾನುವಾರ ಜನತಾ ಕರ್ಫ್ಯೂ ಪಾಲನೆಗೆ ಕರೆ ಕೊಟ್ಟಿದ್ದಾರೆ. ಇದಕ್ಕೆ ದೇಶದಾದ್ಯಂತೆ ವ್ಯಾಪಕ ಬೆಂಬಲವಾಗುತ್ತಿದೆ. 

ಅದರಲ್ಲೂ ಕರ್ನಾಟಕದ ಜನರಿಗೆ ಸಿಎಂ ಯಡಿಯೂರಪ್ಪ ಪತ್ರಿಕಾ ಪ್ರಕಟಣೆ ಮೂಲಕ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಅದೂ ಕೆಳಗಿನಂತಿದೆ ನೋಡಿ. ಪ್ರಧಾನಿ ನರೇಂದ್ರ ಮೋದೀಜೀಯವರು ಕರೆ ನೀಡಿರುವಂತೆ ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕಫ್ರ್ಯೂ ಆಚರಣೆಗೆ ನಿಮ್ಮೆಲ್ಲರ ಬೆಂಬಲ ಅತಿ ಅಗತ್ಯವಾಗಿದೆ. ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ನಾವೆಲ್ಲರೂ ಮನೆಯಲ್ಲಿ ಉಳಿದು ನಿಜವಾದ ಅರ್ಥದಲ್ಲಿ ಕರ್ಫ್ಯೂವನ್ನು ಬೆಂಬಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ 19ಕ್ಕೇರಿದ ಕೊರೋನಾ, ಕನ್ನಡ ನಟಿಯ ಮದ್ವೆ ನಿಜಾನಾ? ಮಾ.21ರ ಟಾಪ್ 10 ಸುದ್ದಿ!

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ರಾಜ್ಯವು ದೇಶದಲ್ಲಿ ಕೊವಿಡ್-19 ವೈರಾಣು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಇದೆಲ್ಲದಕ್ಕೂ ರಾಜ್ಯದ 6.5 ಕೋಟಿ ಜನರ ನೈತಿಕ ಮತ್ತು ಸಾಂಘಿಕ ಬೆಂಬಲ ಕಾರಣ.

ಈ ಸಮಯದಲ್ಲಿ ನನ್ನ ಕಳಕಳಿಯ ಮನವಿಯೆಂದರೆ ರಾತ್ರಿ 9.00 ಗಂಟೆಯ ನಂತರ ಕರ್ಪೂ ಅವಧಿ ಮುಗಿದಿದೆ ಎಂದು ಎಲ್ಲರೂ ಮನೆಯ ಹೊರಗಡೆ ಬಂದು ಸಂಭ್ರಮಿಸುವುದಾಗಲೀ, ಅಥವಾ ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸುವುದಾಗಲೀ ಮಾಡಬೇಡಿ. ಇದು ಬೆಳಿಗ್ಗೆಯಿಂದ ಆಚರಿಸಿದ ರೋಗ ತಡೆಯುವ ಕ್ರಮವಾದ ಕಫ್ರ್ಯೂವನ್ನು ಅರ್ಥರಹಿತವಾಗಿಸುತ್ತದೆ. 

#JanataCurfew ಏನಿರುತ್ತೆ, ಏನಿರೋಲ್ಲ..? ಇಲ್ಲಿದೆ ಡಿಟೇಲ್ಸ್..!

ಪ್ರಧಾನಿ ನರೇಂದ್ರ ಮೋದಿಯವರು ಕೂಡ ನಿಮಗೆ 9 ಗಂಟೆಯಿಂದ ಮನೆ ಹೊರಗಡೆ ಬರದೆ ಮನೆಯವರೆಲ್ಲರೂ ಆಪ್ತರೊಂದಿಗೆ ಕಾಲಕಳೆಯಲು ಮನವಿ ಮಾಡಿರುತ್ತಾರೆ. ಆವಾಗ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯ ಕರ್ಪೂಗೆ ಒಂದು ಅರ್ಥ ಬರುತ್ತದೆ ಮತ್ತು ಸಾರ್ಥಕವಾಗಲಿದೆ. ಇನ್ನೊಮ್ಮೆ ನನ್ನ ಕಳಕಳಿಯ ಮನವಿ ನೀವು ಯಾರೂ ರಾತ್ರಿ 9 ಗಂಟೆಯ ನಂತರ ಹೊರಗೆ ಬರಬೇಡಿ.

ಆದರೆ ಸಂಜೆ 5 ಗಂಟೆಗೆ ನಿಮ್ಮ ಮನೆಯ ಕಿಟಕಿಗಳಿಂದ ಮತ್ತು ಛಾವಣಿಗಳ ಮೇಲಿಂದ ಚಪ್ಪಾಳೆ ತಟ್ಟಿ ಸರಕಾರದ ಮತ್ತು ರೋಗ ತಡೆಯುವಲ್ಲಿ ಭಾಗಿಯಾಗಿರುವ ಜನರಿಗೆ ನೈತಿಕ ಬೆಂಬಲ ಸೂಚಿಸಲು ಮಾತ್ರ ಮರೆಯಬೇಡಿ ಎಂದು ಅವರು ತಿಳಿಸಿದ್ದಾರೆ.

Follow Us:
Download App:
  • android
  • ios