ಬೆಂಗಳೂರು, (ಡಿ.23): ಬ್ರಿಟನ್‌ನಿಂದ ಹೊಸ ಕೊರೋನಾ ವೈರಸ್ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜ್ಯಾದ್ಯಂತ ಇಂದು (ಬುಧವಾರ) ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. 

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. 

ರಾಜ್ಯದಲ್ಲಿ ನೈಟ್ ಕರ್ಫ್ಯೂ: ರಾತ್ರಿ ಪ್ರಯಾಣಿಕರಿಗೆ ಸವದಿ ವಿಶೇಷ ಮನವಿ

ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ. ಇನ್ನು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. 

ಡಿಸಿಗಳಿಗೆ ಸಿಎಸ್ ಸೂಚನೆ
ಹೌದು...ಈ ವೈರಸ್ ಬಹಳ ವೇಗವಾಗಿ ಹರಡುತ್ತೇ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೈಟ್ ಕರ್ಫ್ಯೂ ಕಟ್ಟು ನಿಟ್ಟಾಗಿ ಜಾರಿ ಮಾಡುವ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

 * ಸರ್ಕಾರ ಜಾರಿ ಮಾಡಿರೋ ನೈಟ್ ಕರ್ಫ್ಯೂ ಕಟ್ಟು ನಿಟ್ಟಾಗಿ ಜಾರಿ ಮಾಡಬೇಕು.
* ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ನಿರ್ಬಂಧ ಜಾರಿ ಕಠಿಣವಾಗಿ ಇರಬೇಕು.
* ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕೊಡಿ....
* ಹೊಸ ವರ್ಷದ ಸಂಭ್ರಮಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು.
* ವಿದೇಶದಿಂದ ಬರೋರಿಗೆ ಕಡ್ಡಾಯವಾಗಿ ಕೊರೋನಾ ಟೆಸ್ಟ್ ಮಾಡಿಸಬೇಕು....
* ವಿದೇಶದಿಂದ ಬಂದ ಪ್ರಯಾಣಿಕರು 14 ದಿನಗಳ ಕಾಲ ಜಿಲ್ಲಾಡಳಿತದ ಕಣ್ಗಾವಲಿನಲ್ಲೇ ಇರಬೇಕು.
* ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಕೊರೋನಾ ಟೆಸ್ಟ್ ಮಾಡಿಸಿ...
* ರೂಪಾಂತರ ಕೊರೋನಾ ಅಲೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು.
* ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಲಭ್ಯವಿರುವಂತೆ ಕ್ರಮವಹಿಸಬೇಕು.