ಬೆಂಗಳೂರು(ಮೇ.30): ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದವರಿಗೆ ಎರಡನೇ ಹಂತದ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಮಿ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ವರ್ಗಕ್ಕೆ ಪರಿಹಾರ ನೀಡುವ ಸಂಬಂಧ ಎರಡನೇ ಪ್ಯಾಕೇಜ್‌ ಘೋಷಣೆ ಮಾಡುವ ಕುರಿತು ಸಿದ್ಧತೆ ನಡೆಯುತ್ತಿದೆ. ಎರಡು ಅಥವಾ ಮೂರು ದಿನಗಳಲ್ಲಿ ಘೋಷಣೆ ಮಾಡುತ್ತೇವೆ ಎಂದರು.

ಕೊರೋನಾ ಟೈಮ್‌ನಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಂಗಣ್ಣ ಕರಡಿ

ಈಗಿರುವ ಲಾಕ್‌ಡೌನ್‌ ಮತ್ತೆ ವಿಸ್ತರಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪರಿಸ್ಥಿತಿ ನೋಡಿಕೊಂಡು ಜೂ.6ರ ವೇಳೆಗೆ ತೀರ್ಮಾನ ಕೈಗೊಳ್ಳುತ್ತೇವೆ. ಲಾಕ್‌ಡೌನ್‌ ಕುರಿತು ತಜ್ಞರು ಸದ್ಯಕ್ಕೆ ಯಾವುದೇ ವರದಿ ನೀಡಿಲ್ಲ. ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ತಜ್ಞರು, ಸಚಿವರ ಜತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದ ಕೆಲವು ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಕೋವಿಡ್‌ ಜಾಸ್ತಿ ಇದೆ. ನಿಯಂತ್ರಣಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona