* ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್‌ಗೆ ಉಚಿತ ಚಿಕಿತ್ಸೆ* ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ* ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯ

ಬೆಂಗಳೂರು, (ಮೇ.21): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಮಧ್ಯೆ ಬ್ಲ್ಯಾಕ್ ಫಂಗಸ್ ಆತಂಕ ಮೂಡಿಸಿದ್ದು, ಇದಕ್ಕೆ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರ ತಿಳಿಸಿದೆ. 

ಈ ಬಗ್ಗೆ ಇಂದು (ಶುಕ್ರವಾರ) ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಣೆ ಮಾಡಿದರು.

ರಾಜ್ಯದಲ್ಲಿ ಕೋವಿಡ್ ಮಧ್ಯೆ ಬ್ಲ್ಯಾಕ್ ಫಂಗಸ್ ಅಟ್ಟಹಾಸ: ಇದು ಸಾಂಕ್ರಾಮಿಕ ರೋಗವಲ್ಲ

ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಲಿದ್ದು, ಸರ್ಕಾರವೇ ಚಿಕಿತ್ಸೆಯ ವೆಚ್ಚ ಭರಿಸಲಿದೆ ಎಂದು ಸ್ಪಷ್ಟಪಡಿಸಿದರು.

ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ಪಡೆಯಲು ಹೆಚ್ಚಿನ ಹಣದ ಅಗತ್ಯವಿರುವುದರಿಂದ ಜನ ಸಾಮಾನ್ಯರಿಗೆ ಕಷ್ಟವಾಗುತ್ತದೆ., ಆದ್ದರಿಂದ ಬ್ಲ್ಯಾಕ್ ಫಂಗಸ್ ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದರು.