ಬೆಂಗಳೂರು, (ಜೂನ್ .01): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆ ಅಂದ್ರೆ ಬುಧವಾರ (ಜೂನ್.02) ಮಹತ್ವದ ಸಭೆ ಕರೆದಿದ್ದಾರೆ.

ನಾಳೆ(ಬುಧವಾರ ಸಂಜೆ 6 ಕ್ಕೆ ಸಿಎಂ ಅಧಿಕೃತ ನಿವಾಸದಲ್ಲಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

 ಕರ್ನಾಟಕದಲ್ಲಿ ಜೂನ್ 7ರ ಬಳಿಕ ಅನ್ ಲಾಕ್‌ ಅಥವಾ ಲಾಕ್‌ಡೌನ್ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಬಗ್ಗೆ ಚರ್ಚಿಸಲು ಸಿಎಂ ಈ ಸಭೆ ಕರೆದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕದಲ್ಲಿ ಕೊರೋನಾ ಪಾಸಿವಿಟಿವಿ ಪ್ರಮಾಣ ಇಳಿಕೆ, ಕೊಂಚ ನಿರಾಳ ಭಾವ

ಕೆಲ ಸಚಿವರು ಅನ್‌ಲಾಕ್‌ ಎನ್ನುತ್ತಿದ್ದರೆ, ಇನ್ನು ಹಲವಾರು ಸಚಿವರು ಲಾಕ್‌ಡೌನ್ ಒಂದು ವಾರ ವಿಸ್ತರಣೆ ಮಾಡುವ ಕುರಿತು ಸುಳಿವು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಎಂ ಈ ಬಗ್ಗೆ ಚರ್ಚಿಸಲು ಮಹತ್ವದ ಸಭೆ ಕರೆದಿದ್ದು,  ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವ ಅಥವ ಅನ್‌ಲಾಕ್ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಇನ್ನು ಸಭೆಯಲ್ಲಿ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಒಳಗೊಂಡ ಸದಸ್ಯರು , ಕೊರೋನಾ ಉಸ್ತುವಾರಿ, ಡಿಸಿಎಂ, ಸಚಿವರು, ಹಿರಿಯ ಅಧಿಕಾರಿಗಳ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಜೂನ್ 7ಕ್ಕೆ ಮುಕ್ತಾಯವಾಗಲಿದೆ. ಮತ್ತೊಂದೆಡೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗುತ್ತಿದೆ. ಇದರಿಂದ ಲಾಕ್‌ಡೌನ್ ವಿಸ್ತರಣೆ ಮಾಡಬೇಕೋ, ಬೇಡ್ವೋ ಎನ್ನುವ ಬಗ್ಗೆ ಸಿಎಂ ತಜ್ಞರ ಅಭಿಪ್ರಾಯ ಕೇಳಲಿದ್ದಾರೆ.