ಬೆಂಗಳೂರು, (ಸೆ.24): ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರಿ ಅರುಣಾದೇವಿ ಉದಯಕುಮಾರ ನೇಮಕವಾಗಿದ್ದಾರೆ. 

ಮಹಾಸಭಾದ ಕೇಂದ್ರ ಕಚೇರಿಯಲ್ಲಿ ಇಂದು (ಗುರುವಾರ) ನಡೆದ ಪದಗ್ರಹಣ ಸಮಾರಂಭದಲ್ಲಿ ಅರುಣಾದೇವಿ ಉದಯಕುಮಾರ ಅಧಿಕಾರ ಸ್ವೀಕರಿಸಿದರು.

RCBಗೆ ಕನ್ನಡಿಗರ ಚಾಲೆಂಜ್, ವಿಫಲವಾಯ್ತು ಚೀನಾ ರಿವೇಂಜ್: ಸೆ.24ರ ಟಾಪ್ 10 ಸುದ್ದಿ!

ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು ಎಂದು ಮಹಾಸಭಾ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.