ಬೆಂಗಳೂರು, (ಡಿ.23): ಕೊರೋನಾ ಹೊಸ ರೂಪಾಂತರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು (ಬುಧವಾರ) ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಜಾರಿ ಆಗಬೇಕಿದ್ದ ನೈಟ್ ಕರ್ಫ್ಯೂನಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ಈ ಮೊದಲು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಲಾಗಿತ್ತು. ಆದರೆ, ಸರ್ಕಾರ ಈಗ ಸಮಯ ಬದಲಿಸಿದೆ. ರಾತ್ರಿ‌ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮಾತ್ರ ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬುಧವಾರ ರಾತ್ರಿ ಬದಲಾಗಿ  ಗುರುವಾರ ಅಂದ್ರೆ ಡಿ. 24ರಿಂದ ನೈಟ್ ಕರ್ಫ್ಯೂ ಜಾರಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಅಲ್ಲದೇ ರಾತ್ರಿ 10ರಿಂದ ಬೆಳಗ್ಗೆ 6ರ ಬದಲಾಗಿ, ರಾತ್ರಿ11ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಬಿಎಸ್‌ವೈ ತಿಳಿಸಿದ್ದಾರೆ.

ನೈಟ್ ಕರ್ಫ್ಯೂ ಜಾರಿ: ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಅಬಕಾರಿ ಸಚಿವ. ..!

ಇನ್ನು ದಿನಾಂಕ 24ರಂದು ಕ್ರಿಸ್ಮಸ್ ಹಬ್ಬದ ಧಾರ್ಮಿಕ ಕಾರ್ಯಕ್ರಮಗಳಿಗೆ ಯಾವುದೇ ಅಡೆಚಡಣೆ ಇಲ್ಲ. ಮಿಡ್‌ ನೈಟ್ ವರೆಗೂ ಮಾಡಬಹದು ಎಂದು ಯಡಿಯೂರಪ್ಪ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.